ದೇಶ

ಕಾರ್ತಿ ಚಿದಂಬರಂ ಬಂಧನ: ಸಿಬಿಐ ವಿಶ್ವಾಸಾರ್ಹ ಸಂಸ್ಥೆ ಎಂದ ಗೃಹ ಸಚಿವ ರಾಜನಾಥ್ ಸಿಂಗ್

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಐಎನ್ಎಸ್ ಮೀಡಿಯಾ ಪ್ರಕರಣ ಸಂಬಂಧ ಸಿಬಿಐ ತನ್ನ ಕಾರ್ಯವನ್ನು ಮಾಡುತ್ತಿದ್ದು, ಸಿಬಿಐ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ಕಾರ್ತಿ ಚಿದಂಬರಂ ಬಂಧನ: ಸಿಬಿಐ ವಿಶ್ವಾಸಾರ್ಹ ಸಂಸ್ಥೆ ಎಂದ ಗೃಹ ಸಚಿವ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
Published On :
ತೇಜ್ಪುರ; ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಐಎನ್ಎಸ್ ಮೀಡಿಯಾ ಪ್ರಕರಣ ಸಂಬಂಧ ಸಿಬಿಐ ತನ್ನ ಕಾರ್ಯವನ್ನು ಮಾಡುತ್ತಿದ್ದು, ಸಿಬಿಐ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ. 
ಕಾರ್ತಿ ಚಿದಂಬರಂ ಬಂಧನಕ್ಕೊಳಗಾಗಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿಬಿಐ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ತನ್ನ ಕಾರ್ಯವನ್ನು ಅದು ಮಾಡುತ್ತಿದೆ. ಪ್ರಸ್ತುತ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ ಎಂದು ಹೇಳಿದ್ದಾರೆ. 
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕಾರ್ತಿ ಚಿದಂಬರಂ ಅವರು ಬಂಧನಕ್ಕೊಳಗಾಗಿದ್ದರು. ಬಂಧನದ ಬಳಿಕ ಕಾರ್ತಿ ಚಿದಂಬರಂ ಅವರನ್ನು ದೆಹಲಿ ಪಾಟಿಯಾಲ ನ್ಯಾಯಾಲಯ 1 ದಿನ ದೆಹಲಿ ಪೊಲೀಸರ ವಶಕ್ಕೆ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.