ವಿವಾಹ ವಿಚ್ಛೇದನ ಕೇಳಿದ ಓಮರ್ ಅಬ್ದುಲ್ಲಾ, ಮರು ಮದುವೆಗೆ ಉತ್ಸುಕ: ಹೈ ಕೋರ್ಟ್ ಗೆ ಮಾಹಿತಿ
ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ವಿವಾಹ ವಿಚ್ಛೇದನ ಕೇಳಿದ್ದು, ಮರು ವಿವಾಹವಾಗಲು ಬಯಸಿದ್ದಾರೆ. ಈ ಕುರಿತು ದೆಹಲಿ ಹೈಕೋರ್ಟ್ ಓಮರ್ ಅಬ್ದುಲ್ಲಾ ಅವರ ಪತ್ನಿ ಪಾಯಲ್...

Published On :
ನವದೆಹಲಿ: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ವಿವಾಹ ವಿಚ್ಛೇದನ ಕೇಳಿದ್ದು, ಮರು ವಿವಾಹವಾಗಲು ಬಯಸಿದ್ದಾರೆ. ಈ ಕುರಿತು ದೆಹಲಿ ಹೈಕೋರ್ಟ್ ಓಮರ್ ಅಬ್ದುಲ್ಲಾ ಅವರ ಪತ್ನಿ ಪಾಯಲ್ ಅಬ್ದುಲ್ಲಾರಿಂದ ಪ್ರತಿಕ್ರಿಯೆ ಕೇಳಿದೆ.
ನ್ಯಾ. ಸಿದ್ಧಾರ್ಥ್ ಮೃದುಲ್ ಹಾಗೂ ದೀಪಾ ಶರ್ಮಾ ಅವರಿದ್ದ ವಿಭಾಗೀಯ ಪೀಠ ಪಾಯಲ್ ಅಬ್ದುಲ್ಲಾ ಗೆ ಏ.23 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ. ವಿಚ್ಛೇದನದ ವಿಚಾರವಾಗಿ ತ್ವರಿತ ವಿಚಾರಣೆ ನಡೆಸುವುದಕ್ಕೆ ಓಮರ್ ಅಬ್ದುಲ್ಲಾ ಆಗ್ರಹಿಸಿದ್ದು ಈ ಬಗ್ಗೆ ಪಾಯಲ್ ನಿಲುವನ್ನೂ ಕೋರ್ಟ್ ಕೇಳಿದೆ.
ಓಮರ್ ಅಬ್ದುಲ್ಲಾ ಪರವಾಗಿ ವಾದ ಮಂಡಿಸಿರುವ ಮಾಳವಿಕಾ ರಾಜ್ಕೋಟಿಯಾ, " ಓಮರ್ ಅಬ್ದುಲ್ಲಾ ಹಾಗೂ ಪಾಯಲ್ ಅಬ್ದುಲ್ಲಾ ಮರು ಮದುವೆಯಾಗಲು ಇಚ್ಛಿಸುತ್ತಿದ್ದಾರಾ? ಎಂದು ಕೋರ್ಟ್ ಕೇಳಿತ್ತು, ಈ ಪ್ರಶ್ನೆಗೆ ಪಾಯಲ್ ಅಬ್ದುಲ್ಲಾ ಸಕಾರಾತ್ಮಕವಾಗಿ ಸ್ಪಂಧಿಸಿದ್ದರು. ಈ ಹಿಂದೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಓಮರ್ ಅಬ್ದುಲ್ಲಾ ತಮ್ಮ ವೈವಾಹಿಕ ಜೀವನ ಸರಿಪಡಿಸಲಾಗದ ಮಟ್ಟಿಗೆ ಮುರಿದಿದೆ ಎಂದು ಹೇಳಿದ್ದರು. ಆದರೆ ಅದನ್ನು ಕೋರ್ಟ್ ನಲ್ಲಿ ಸಾಬೀತುಪಡಿಸಲು ವಿಫಲರಾಗಿದ್ದರು. 1994 ರಲ್ಲಿ ವಿವಾಹವಾಗಿದ್ದ ಓಮರ್ ಅಬ್ದುಲ್ಲಾ ಪಾಯಲ್ ಅಬ್ದುಲ್ಲಾ ವಿವಾಹವಾಗಿದ್ದರು ಆದರೆ 2007 ರಿಂದ ತಮ್ಮ ವೈವಾಹಿಕ ಜೀವನ ಮುರಿದುಬಿದ್ದಿದೆ ಎಂದು ಅಬ್ದುಲ್ಲಾ ಕೋರ್ಟ್ ಗೆ ಹೇಳಿದ್ದರು. ಇದಕ್ಕೆ ಪೂರಕವೆಂಬಂತೆ 2009 ರಿಂದಲೂ ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


