ಪಿಎನ್ ಬಿ ವಂಚನೆ ಪ್ರಕರಣ: ಇಡಿಯಿಂದ ಉದ್ಯಮಿ ಮೆಹುಲ್ ಚೋಕ್ಸಿಗೆ ಸೇರಿದ 1,217 ಕೋಟಿ ಆಸ್ತಿ ಜಪ್ತಿ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೆಹುಲ್ ಚೋಕ್ಸಿಗೆ ಸೇರಿದ ಒಟ್ಟು 1, 217 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ.

Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೆಹುಲ್ ಚೋಕ್ಸಿಗೆ ಸೇರಿದ ಒಟ್ಟು 1, 217 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ದೆಹಲಿ ಸೇರಿದಂತೆ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಒಟ್ಟು 41 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಆಸ್ತಿಯ ಮೌಲ್ಯ ಸುಮಾರು 1200 ಕೋಟಿ ರೂಗಳಿಗೂ ಅಧಿಕವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಮೆಹುಲ್ ಚೋಕ್ಸಿಯ ಸಮೂಹ ಸಂಸ್ಥೆಗಳಾದ ಗೀತಾಂಜಲಿ ಜೆಮ್ಸ್ ಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಲಾಗಿದ್ದು,. ಚೋಕ್ಸಿ ಸಮೂಹಕ್ಕ ಸೇರಿದ ಮುಂಬೈನಲ್ಲಿರುವ 15 ಫ್ಲಾಟ್ ಗಳು, 17 ಕಚೇರಿಗಳು, ಕೋಲ್ಕತಾದಲ್ಲಿರುವ ಒಂದು ಮಾಲ್, ಅಲಿಭಾಗ್ ನಲ್ಲಿರುವ ಸುಮಾರು 4 ಎಕರೆ ಪ್ರದೇಶದ ಒಂದು ಫಾರ್ಮ್ ಹೌಸ್, ನಾಸಿಕ್, ನಾಗಪುರ, ತಮಿಳು ನಾಡಿನ ಪನ್ವೆಲ್ ಮತ್ತು ವಿಳ್ಳುಪುರಂನಲ್ಲಿರುವ ಸುಮಾರು 231 ಎಕರೆ ಭೂಮಿ, ಹೈದರಾಬಾದ್ ನಲ್ಲಿರುವ ಸುಮಾರು 170 ಎಕರೆ ಪಾರ್ಕ್, ರಂಗಾರೆಡ್ಡಿಯಲ್ಲಿರುವ ಸುಮಾರು 500 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಇದಲ್ಲದೆ ಮಹಾರಾಷ್ಟ್ರ ರಾಜಧಾನಿ ಮುಂಬೈನ ಸಮೀಪವಿರುವ ಬೊರಿವಲಿ ಪ್ರದೇಶದಲ್ಲಿರುವ ನಾಲ್ಕು ಫ್ಲಾಟ್ ಗಳು, ಸ್ಯಾಂಟಾಕ್ರೂಜ್ ನ ಖೆಮು ಟವರ್ಸ್ ನಲ್ಲಿರುವ 9 ಫ್ಲಾಟ್ ಗಳಿಗೂ ಇಡಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಈ ಎಲ್ಲ ಆಸ್ತಿಗಳ ಮೌಲ್ಯ ಸುಮಾರು 1, 200 ಕೋಟಿ ಗೂ ಅಧಿಕ ಎಂದು ಅಂದಾಜಿಸಲಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸುಮಾರು 11, 400 ಕೋಟಿಗೂ ಅಧಿಕ ಹಣವನ್ನು ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಭರಣ ಉಧ್ಯಮಿಗಳಾದ ನೀರವ್ ಮೋದಿ, ಆತನ ಸೋದರ ಮಾವ ಉದ್ಯಮಿ ಮೆಹುಲ್ ಚೋಕ್ಸಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಉದ್ಯಮಿ ನೀರವ್ ಮೋದಿ ದೇಶದಿಂದ ಪರಾರಿಯಾಗಿ ವಿದೇಶದಲ್ಲಿ ನೆಲೆಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


