ಮಧ್ಯ ಪ್ರದೇಶ: ಬಹಿರ್ದೆಸೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಮನನೊಂದು ಮಹಿಳೆ ಆತ್ಮಹತ್ಯೆ
ಇಬ್ಬರು ಪುರುಷರಿಂದ ಲಿಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Published On :
ಬೇತುಲ್ (ಮಧ್ಯಪ್ರದೇಶ): ಇಬ್ಬರು ಪುರುಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಪಾಥರ್ ಗ್ರಾಮದವರಾದ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
19 ವರ್ಷದವರಾದ ಈಕೆ ಆತ್ಮಹತ್ಯೆಗೆ ಮುನ್ನ ಪತ್ರವನ್ನು ಬರೆದಿಟ್ಟಿದ್ದು ಆಕೆ ಬಹಿರ್ದೆಸೆಗೆ ತೆರಳಿದ್ದಾಗ ಇಬ್ಬರು ಪುರುಷರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಬಲರಾಮ್ ಧರ್ವೆ ಹಾಗೂ ರಾಜೇಶ್ ಕಕೋಡಿಯಾ ಅವರುಗಳನ್ನು ಪೋಲೀಸರು ಬಂಧಿಸಿದ್ದು ವಿಚಾರಣೆ ನಡೆಸಿದ್ದಾರೆ. "ನಾವೀಗಾಗಲೇ ಇಬ್ಬರನ್ನು ವಶಕ್ಕೆ ಪಡೆದಿದ್ದು ತನಿಖೆ ಪ್ರಗತಿಯಲ್ಲಿದೆ" ಎಂದು ಪೋಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲೈಂಗಿಕ ಕಿರುಕುಳMadhya Pradeshಬಹಿರ್ದೆಸೆಮಧ್ಯಪ್ರದೇಶಮಹಿಳೆ ಆತ್ಮಹತ್ಯೆwoman suicidedefecating in opensexual molested
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


