ಭೀಮ ಕೋರೆಗಾಂವ್ ಹಿಂಸಾಚಾರದ ಹಿಂದೆ ಆರ್ಎಸ್ಎಸ್ ಕೈವಾಡ: ಮಲ್ಲಿಕಾರ್ಜುನ ಖರ್ಗೆ ಆರೋಪ
ಭೀಮ್ ಕೋರೆಗಾಂವ್ ಹಿಂಸಾಚಾರ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂಸಾಚಾರದ ಹಿಂದೆ..

Published On :
ನವದೆಹಲಿ: ಭೀಮ್ ಕೋರೆಗಾಂವ್ ಹಿಂಸಾಚಾರ ಪ್ರಕರಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂಸಾಚಾರದ ಹಿಂದೆ ರಾಷ್ಟ್ರೀಯ ಸ್ವಯಂಸೇವಾ ಸಂಘ (ಆರ್ಎಸ್ಎಸ್) ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಲೋಕಸಭೆಯಲ್ಲಿ ಹಿಂಸಾಚಾರದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಭಾರತದಲ್ಲಿ ದಲಿತರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಮಹಾರಾ, ಮರಾಠರ ಮಧ್ಯೆ ವಿಷ ಬೀಜ ಬಿತ್ತಲಾಗುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಪ್ರದೇಶಗಳಲ್ಲೇ ಹೆಚ್ಚು ಹಿಂಸಾಚಾರಗಳು ನಡೆಯುತ್ತಿವೆ. ಭೀಮ್ ಕೋರೆಗಾಂವ್ ಹಿಂಸಾಚಾರಕ್ಕೆ ಮಹಾರಾಷ್ಟ್ರ ಸರ್ಕಾರವೇ ನೇರ ಹೊಣೆ. ಸುರ್ಪೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ಹಿಂಸಾಚಾರಕ್ಕೆ ಕಾರಣರಾದವನ್ನು ಹಿಡಿದು ಶಿಕ್ಷಿಸಬೇಕು ಎಂದು ಹೇಳಿದರು.
ಇನ್ನು ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸದನಕ್ಕೆ ಉತ್ತರಿಸಬೇಕು. ಈ ವಿಷಯವಾಗಿ ಅವರು ಮೌನವಾಗಿ ಕೂರಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟು ಹಿಡಿದರು. ಇದಕ್ಕೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು ಪುಣೆ ಹಿಂಚಾಸಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ವೇಳೆ ಸದನದಲ್ಲಿ ಗದ್ದಲ, ಕೋಲಾಹಲ ಸೃಷ್ಠಿಯಾಗಿದ್ದರಿಂದ ಸ್ಪೀಕರ್ ಸುಮಿತ್ರ ಮಹಾಜನ್ ಅವರು ಸದವನ್ನು 2 ಗಂಟೆಗೆ ಮುಂದೂಡಲಾಯಿತು.
ಪುಣೆಯಲ್ಲಿ ನಡೆದ ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ನಡೆದಿದ್ದು ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ದಲಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದನ್ನು ಖಂಡಿಸಿ ದಲಿತ ಸಂಘಟನೆಗಳು ಪ್ರತಿಭಟನೆಗಳನ್ನು ನಡೆಸುತ್ತಿದ್ದು ಪುಣೆಯಲ್ಲಿ ಹುಟ್ಟಿಕೊಂಡ ಕಲಹ ರಾಜ್ಯದಾದ್ಯಂತ ವ್ಯಾಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
RSSMallikarjun khargeLok Sabhaಮಲ್ಲಿಕಾರ್ಜುನ ಖರ್ಗೆಲೋಕಸಭೆಆರ್ಎಸ್ಎಸ್Bhima-Koregaon violenceಭೀಮಾ ಕೊರೆಗಾಂವ್ ಹಿಂಸಾಚಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


