ದೇಶ

ಜಿಗಿಶಾ ಘೊಷ್ ಹತ್ಯೆ: ಇಬ್ಬರು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದ ದೆಹಲಿ ಹೈಕೋರ್ಟ್

2009ರಲ್ಲಿ ನಡೆದಿದ್ದ ಜಿಗಿಶಾ ಘೊಷ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ದೆಹಲಿ ಹೈಕೋರ್ಟ್ ಇಂದು ತೀರ್ಪು ನಿಡಿದೆ.

ಜಿಗಿಶಾ ಘೊಷ್ ಹತ್ಯೆ: ಇಬ್ಬರು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದ ದೆಹಲಿ ಹೈಕೋರ್ಟ್
ಜಿಗಿಶಾ ಘೊಷ್
Published On :
ನವದೆಹಲಿ: 2009ರಲ್ಲಿ ನಡೆದಿದ್ದ ಜಿಗಿಶಾ ಘೊಷ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ದೆಹಲಿ ಹೈಕೋರ್ಟ್ ತೀರ್ಪು ನಿಡಿದೆ. 
ಎಸ್ ಮುರಳೀಧರ್ ಮತ್ತು ಐ ಎಸ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದ್ದು ಮೂರನೇ ಆರೋಪಿಗೆ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದಿದ್ದಾರೆ.
ಜಿಗಿಶಾ ಘೊಷ್ ಅಪಹರಣ ಹಾಗೂ ಕೊಲೆ ಆರೋಪದಡಿ ರವಿ ಕಪೂರ್, ಅಮಿತ್ ಶುಕ್ಲಾ ಮತ್ತು ಬಲ್ಜೀತ್ ಸಿಂಗ್ ಮಲಿಕ್ ಆರೋಪಿಗಳಾಗಿದ್ದು ಈ ಹಿಂದೆ ವಿಶೇಷ ನ್ಯಾಯಾಲಯವು ರವಿ ಕಪೂರ್, ಅಮಿತ್ ಶುಕ್ಲಾ ಅವರುಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಮೂರನೇ ಅಪರಾಧಿ  ಬಲ್ಜೀತ್ ಸಿಂಗ್ ನ ಸನ್ನಡತೆಯ ಕಾರಣ ಜೀವಾವಧಿ ಶಿಕ್ಷೆಗೆ ಗುರಿಮಾಡಲಾಗಿತ್ತು.  ಇದೀಗ ದೆಹಲಿ ಹೈಕೋರ್ಟ್ ಮೊದಲೆರಡೂ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದೆ.
ಜಿಗಿಶಾ ಘೊಷ್ (28) ಹೆವಿಟ್ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಆಪರೇಷನ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈಕೆಯನ್ನು ದಕ್ಷಿಣ ದಿಲ್ಲಿಯ ವಸಂತ್ ವಿಹಾರ್ ಪ್ರದೇಶದಿಂದ ಮಾರ್ಚ್ 18, 2009ರಂದು ಅಪಹರಿಸಿ ಹತ್ಯೆ ಮಾಡಲಾಗಿತ್ತು.  ಮಾರ್ಚ್ 20 2009ರಂದು ಹರಿಯಾಣದ ಸೂರಜ್‌ಖುಂಡ್‌ನಲ್ಲಿ ಜಿಗಿಶಾ ಮೃತದೇಹ ಪತ್ತೆಯಾಗಿತ್ತು. ಈ ಕೊಲೆ ಪ್ರಕರಣದ ಹಿಂದೆ ದರೋಡೆಯ ಉದ್ದೇಶವಿದೆ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.