ದೇಶ

ಮುಂಬೈ: ದಲಿತ ಮುಖಂಡ ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ಕೋರೆಗಾಂವ್ ಪ್ರತಿಭಟನೆ ಬೆನ್ನಲ್ಲೇ ಇತ್ತ ಮುಂಬೈನಲ್ಲಿ ಆಯೋಜನೆಯಾಗಿದ್ದ ದಲಿತ ಮುಖಂಡ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ದಲಿತ ಮುಖಂಡ ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ
ವಿದ್ಯಾರ್ಥಿಗಳ ಹೊರ ಹಾಕುತ್ತಿರುವ ಪೊಲೀಸರು
Published On :
ಮುಂಬೈ: ಕೋರೆಗಾಂವ್ ಪ್ರತಿಭಟನೆ ಬೆನ್ನಲ್ಲೇ ಇತ್ತ ಮುಂಬೈನಲ್ಲಿ ಆಯೋಜನೆಯಾಗಿದ್ದ ದಲಿತ ಮುಖಂಡ ಹಾಗೂ ಶಾಸಕ ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು  ತಿಳಿದುಬಂದಿದೆ.
ಮುಂಬೈನ ಭೈದಾಸ್ ಹಾಲ್ ನಲ್ಲಿ ಇಂದು ದಲಿತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜಿಗ್ನೇಶ್ ಮೇವಾನಿ ಹಾಗೂ ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಭಾಷಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಕಾನೂನು ಮತ್ತು  ಸುವ್ಯವಸ್ಥೆ ದೃಷ್ಟಿಯಿಂದ ಮುಂಬೈ ಪೊಲೀಸರು ಜಿಗ್ನೇಶ್ ಮೇವಾನಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಅಲ್ಲದೆ ಭೈದಾಸ್ ಹಾಲ್ ನಲ್ಲಿ ಆಯೋಜನೆಯಾಗಿದ್ದ ಛಾತ್ರಭಾರತಿ  ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು,  ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಾಜರಾಗಿದ್ದ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ಬಲವಂತವಾಗಿ ಹೊರಗೆ ಕಳುಹಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಛಾತ್ರಭಾರತಿ ಉಪಾಧ್ಯಕ್ಷ ಸಾಗರ್ ಭಲೆರಾವ್ ಅವರು, ಕಾರ್ಯಕ್ರಮಕ್ಕೆ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ಅವರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಇಬ್ಬರು ಮುಖಂಡರು  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಪೊಲೀಸರು ಭದ್ರತಾ ಕಾರಣವೊಡ್ಡಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.