ರೂ.500 ಕ್ಕೆ ಆಧಾರ್ ಮಾಹಿತಿ ಮಾರಾಟ: ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಯುಐಡಿಎಐ
500 ರೂಪಾಯಿ ನೀಡಿದರೆ 10 ನಿಮಿಷಗಳಲ್ಲಿ ಆಧಾರ್ ಕಾರ್ಡ್ ಗಳ ಮಾಹಿತಿಯನ್ನು ಪಡೆಯಬಹುದು ಎಂಬ ಮಾಧ್ಯಮಗಳ ವರದಿಯನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ತಳ್ಳಿಹಾಕಿದೆ.

Published On :
ನವದೆಹಲಿ: 500 ರೂಪಾಯಿ ನೀಡಿದರೆ 10 ನಿಮಿಷಗಳಲ್ಲಿ ಒಂದು ಬಿಲಿಯನ್ ಆಧಾರ್ ಕಾರ್ಡ್ ಗಳ ಮಾಹಿತಿಯನ್ನು ಪಡೆಯಬಹುದು ಎಂಬ ಮಾಧ್ಯಮಗಳ ವರದಿಯನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ತಳ್ಳಿಹಾಕಿದೆ.
ವರದಿಯನ್ನು ತಪ್ಪು ಎಂದು ಹೇಳಿರುವ ಯುಐಡಿಎಐ, ಆಧಾರ್ ಡಾಟಾ ದುರ್ಬಳಕೆಯಾಗಿಲ್ಲ ಎಂದು ಯುಐಡಿಎಐ ಸ್ಪಷ್ಟನೆ ನೀಡಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವುದಕ್ಕೆ ರಾಜ್ಯ ಅಥವಾ ನಿಗದಿಪಡಿಸಿರುವ ಸಿಬ್ಬಂದಿಗಳಿಗೆ ಮಾತ್ರ ಸರ್ಚ್ ಸೌಲಭ್ಯಗಳನ್ನು ನೀಡಲಾಗಿದೆ. ಆದರೆ ಆಧಾರ್ ಕಾರ್ಡ್ ಗಳ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗಿದೆ, ಈ ಘಟನೆ ಬಹುಶಃ ಸರ್ಚ್ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ ಇರಬಹುದು ಎಂದು ಯುಐಡಿಎಐ ಹೇಳಿದೆ.
ಯುಐಡಿಎಐ ಬಳಿ ಲಾಗ್ ಇನ್ ಆಗಿರುವ ವಿವರಗಳು ಲಭ್ಯ ಇರುವುದರಿಂದ ಯಾವ ವ್ಯಕ್ತಿ ಡಾಟಾ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂಬನ್ನು ಪರಿಶೀಲಿಸಿ ಆತನ ವಿರುದ್ಧ ದೂರು ದಾಖಲಿಸಲಾಗುತ್ತಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


