ಮುಸ್ಲಿಂ ಮಹಿಳೆಯರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ: ಅನಂತ್ ಕುಮಾರ್
ಪ್ರಸಕ್ತ ಸಾಲಿನ ಅಧಿವೇಶನದಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗದೇ ಹಾಗೆಯೇ ಉಳಿದಿದ್ದು

Published On :
ನವದೆಹಲಿ: ಪ್ರಸಕ್ತ ಸಾಲಿನ ಅಧಿವೇಶನದಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗದೇ ಹಾಗೆಯೇ ಉಳಿದಿದ್ದು, ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ತ್ರಿವಳಿ ತಲಾಖ್ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಕ್ರಮವನ್ನು ಅನಂತ್ ಕುಮಾರ್ ಟೀಕಿಸಿದ್ದು, ಕಾಂಗ್ರೆಸ್ ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ತಾವು ಶಾ ಬಾನು ಪ್ರಕರಣದಲ್ಲಿ ಮಾಡಿದ್ದ ತಪ್ಪಿನಿಂದ ಪಾಠ ಕಲಿತು ಈಗ ತ್ರಿವಳಿ ತಲಾಖ್ ಮಸೂದೆ ಅಂಗೀಕಾರಕ್ಕೆ ಸಹಕರಿಸಬೇಕು ಎಂದು ಅನಂತ್ ಕುಮಾರ್ ಹೇಳಿದ್ದಾರೆ.
ಸೆಲೆಕ್ಟ್ ಸಮಿತಿಗೆ ಮಸೂದೆಯನ್ನು ಕಳಿಸಬೇಕೆಂಬ ಕಾಂಗ್ರೆಸ್ ನವರ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿರುವ ಅನಂತ್ ಕುಮಾರ್, ದಾರಿ ತಪ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಈ ರೀತಿಯ ಬೇಡಿಕೆ ಮುಂದಿಟ್ಟಿದೆ ಎಂದು ಅನಂತ್ ಕುಮಾರ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


