ದೇಶ

ರಾಖಿ ಸಾವಂತ್ ವಿರುದ್ಧ ಹನಿಪ್ರೀತ್ ತಾಯಿಯಿಂದ 5 ಕೋಟಿ ಮಾನನಷ್ಟ ಮೊಕದ್ದಮೆ!

ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ತಾಯಿ ಬಾಲಿವುಡ್ ನಟಿ...

ರಾಖಿ ಸಾವಂತ್ ವಿರುದ್ಧ ಹನಿಪ್ರೀತ್ ತಾಯಿಯಿಂದ 5 ಕೋಟಿ ಮಾನನಷ್ಟ ಮೊಕದ್ದಮೆ!
ರಾಖಿ ಸಾವಂತ್
Published On :
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ತಾಯಿ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 
ರಾಖಿ ಸಾವಂತ್ ಅವರು ಹನಿಪ್ರೀತ್ ಇನ್ಸಾನ್ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಹೀಗಾಗಿ 30 ದಿನಗಳ ಒಳಗಾಗಿ ಕ್ಷಮೆ ಕೋರಬೇಕೆಂದು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಒಂದು ವೇಳೆ ರಾಖಿ ಸಾವಂತ್ ಕ್ಷಮೆ ಕೋರದಿದ್ದರೆ 5 ಕೋಟಿ ರುಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟಿಸಿನಲ್ಲಿ ತಿಳಿಸಿದ್ದಾರೆ. 
ರಾಮ್ ರಹೀಂ ಬಂಧನದ ವೇಳೆ ರಾಖಿ ಸಾವಂತ್ ಅವರು ತಮ್ಮ ಅಭಿಪ್ರಾಯವನ್ನು ಹೇಳುತ್ತಾ. ಹನಿಪ್ರೀತ್-ರಾಮ್ ರಹೀಂ ಸಂಬಂಧದ ಬಗ್ಗೆಯೂ ಮಾತನಾಡಿದ್ದರು. 
ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂ ಸಿಂಗ್ ದೋಷಿ ಎಂದು ಘೋಷಿಸಿದ ಬಳಿಕ ಪಂಚಕುಲದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಪ್ರೀತ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದು ಕಳೆದ ಅಕ್ಟೋಬರ್ ತಿಂಗಳಲ್ಲಿ ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.