ಸಂಸತ್ ಅಧಿವೇಶನದ ಕೊನೆ ದಿನ ಅರುಣ್ ಜೇಟ್ಲಿಯಿಂದ ಆನಂದ್ ಶರ್ಮಾಗೆ ಬರ್ತ್ ಡೇ ಪಾರ್ಟಿ!
ಸಂಸತ್ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬರ್ತ್ ಡೇ ಬಾಯ್....

Published On :
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬರ್ತ್ ಡೇ ಬಾಯ್, ರಾಜ್ಯಸಭೆ ಕಾಂಗ್ರೆಸ್ ಉಪ ನಾಯಕ ಆನಂದ್ ಶರ್ಮಾ ಅವರಿಗೆ ಔತಣಕೂಟ ಏರ್ಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಆನಂದ್ ಶರ್ಮಾ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ರಾಜ್ಯಸಭಾ ನಾಯಕ ಅರುಣ್ ಜೇಟ್ಲಿ ಅವರು ಸಂಸತ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಎಲ್ಲಾ ಪಕ್ಷದ ಸಂಸದರಿಗೆ ಔತಣಕೂಟ ಆಯೋಜಿಸಿದ್ದರು. ರೈಲ್ವೆ ಸಚಿವ ಪಿಯೂಸ್ ಗೋಯಲ್ ಅವರು ಕೇಕ್ ತರಿಸಿ, ಎಲ್ಲರ ಸಮ್ಮುಖದಲ್ಲಿ ಕೇಕ್ ಕಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕನ ಹುಟ್ಟು ಹಬ್ಬ ಆಚರಿಸಿದರು.
ಈ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಹರ್ದೀಪ್ ಪುರಿ ಹಾಗೂ ರವಿಶಂಕರ್ ಪ್ರಸಾದ್ ಅವರು ಸೇರಿದಂತೆ ಸುಮಾರು 50ರಿಂದ 60 ಸಂಸದರು ಜೇಟ್ಲಿ ಔತಣಕೂಟದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


