ಮೇವು ಹಗರಣ: ವಿಡಿಯೋ ಕಾನ್ಫರೆನ್ಸ್ ಮೂಲಕ ನಾಳೆ 'ಲಾಲು' ಶಿಕ್ಷೆ ಪ್ರಮಾಣ ಪ್ರಕಟ
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿ 15 ಅಪರಾಧಿಗಳ ಶಿಕ್ಷೆ...

Published On :
ರಾಂಚಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿ 15 ಅಪರಾಧಿಗಳ ಶಿಕ್ಷೆ ಪ್ರಮಾಣದ ತೀರ್ಪನ್ನು ಸಿಬಿಐ ವಿಶೇಷ ಕೋರ್ಟ್ ಮತ್ತೇ ನಾಳೆಗೆ ಮುಂದೂಡಿದೆ.
ಮೇವು ಹಗರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ಪೈಕಿ ಒಂದು ಪ್ರಕರಣದ 22 ಆರೋಪಿಗಳ ಪೈಕಿ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಕಳೆದ ಡಿಸೆಂಬರ್ 23ರಂದು ತೀರ್ಪು ನೀಡಿತ್ತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಜನವರಿ 3ಕ್ಕೆ ಕಾಯ್ದಿರಿಸಿತ್ತು. ಆದರೆ ಇಂದು ಮೂರನೇ ಬಾರಿಗೆ ತೀರ್ಪನ್ನು ಮುಂದೂಡಿದ್ದು ನಾಳೆ 2 ಗಂಟೆ ಸುಮಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷೆ ಪ್ರಮಾಣ ಘೋಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.
ಇದೇ ಪ್ರಕರಣ ಸಂಬಂದ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಸೇರಿ ಇತರೆ ಏಳು ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಖುಲಾಸೆಗೊಳಿಸಿದ್ದರು.
ದೇವಗಡ ಖಜಾನೆಯಿಂದ 90 ಲಕ್ಷ ರುಪಾಯಿ ಹಣವನ್ನು ಅಕ್ರಮವಾಗಿ ಪಡೆದುಕೊಂಡಿರುವ ಈ ಪ್ರಕರಣದಲ್ಲಿ ಲಾಲು ಹಾಗೂ ಮಿಶ್ರಾ ಸೇರಿ 22 ಮಂದಿ ಆರೋಪಿಗಳಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


