ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್‌ನಿಂದ ಜೀವ ಬೆದರಿಕೆ!
ಪಂಜಾಬ್ ಮೂಲದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯಿ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ...

Published On :
ಜೋಧ್‍ಪುರ: ಪಂಜಾಬ್ ಮೂಲದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಶ್ನೋಯಿ ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ.
ಜೋಧ್‍ಪುರ ಸ್ಥಳೀಯ ನ್ಯಾಯಾಲಯದ ಮುಂದೆ ನಟೋರಿಯಸ್ ಗ್ಯಾಂಗ್‌ಸ್ಟರ್ ಬಿಶ್ನೋಯಿಯನ್ನು ಶುಕ್ರವಾರ ಪೊಲೀಸರು ಹಾಜರುಪಡಿಸಿದರು. ನಂತರ ಪೊಲೀಸ್ ವಾಹನಕ್ಕೆ ಹತ್ತುವ ಮುನ್ನ ಜೋಧ್ ಪುರದಲ್ಲೇ ದಬಾಂಗ್ ನಟ ಸಲ್ಮಾನ್ ಖಾನ್ ನನ್ನು ಕೊಲ್ಲುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ.
ಇತ್ತೀಚೆಗಷ್ಟೇ ಲಾರೆನ್ಸ್ ಬಿಶ್ನೋಯಿ ಸಹಚರನೊಬ್ಬ ಉದ್ಯಮಿಯೊಬ್ಬನನ್ನು ಹತ್ಯೆ ಮಾಡಿದ್ದರು. ಅಲ್ಲದೆ ಸುಲಿಗೆಗಾಗಿ ಗುಂಡಿನ ಮಳೆಗರೆದು ಜೋಧ್ ಪುರದಲ್ಲಿ ಆತಂಕ ಸೃಷ್ಟಿಸಿದ್ದನು.
ವ್ಯಾಪಾರಿಗಳಿಗೆ ಭಯ ಹುಟ್ಟಿಸಿ ಅವರಿಂದ ಹಣ ಸುಲಿಗೆ ಮಾಡುವ ಆರೋಪದ ಮೇಲೆ ಬಿಶ್ನೋಯಿಯನ್ನು ಪೊಲೀಸರು ಬಂಧಿಸಿದ್ದು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ನಂತರ ಮಾಧ್ಯಮಗಳ ಜತೆ ಮಾತನಾಡಿದ ಬಿಶ್ನೋಯಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Salman Khanಸಲ್ಮಾನ್ ಖಾನ್Bollywoodಬಾಲಿವುಡ್gangsterdeath threatsಜೀವ ಬೆದರಿಕೆಗ್ಯಾಂಗ್ಸ್ಟರ್Lawrence Bishnoiಲಾರೆನ್ಸ್ ಬಿಶ್ನೋಯಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


