ಲಾಲೂ ಪುತ್ರಿ ಮಿಸಾಭಾರ್ತಿ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ದಾಖಲಿಸಿದ ಇಡಿ
ಸಾರ್ವಜನಿಕ ಹಣ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾಭಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ಮತ್ತೊಂದು ಆರೋಪಪಟ್ಟಿ ದಾಖಲಿಸಿದ್ದಾರೆ.

Published On :
ನವದೆಹಲಿ: ಸಾರ್ವಜನಿಕ ಹಣ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾಭಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ಮತ್ತೊಂದು ಆರೋಪಪಟ್ಟಿ ದಾಖಲಿಸಿದ್ದಾರೆ.
ಮಿಸ್ ಮಿಶೈಲ್ ಪ್ಯಾಕರ್ಸ್ ಹಾಗೂ ಪ್ರಿಂಟರ್ಸ್ ಪ್ರೈ.ಲಿ ಹೆಸರಿನಲ್ಲಿ ಇರುವ ಫಾರ್ಮ್ ಹೌಸ್ ಭಾರ್ತಿ ಹಾಗೂ ಕುಮಾರ್‌ಗೆ ಸೇರಿದ್ದೆಂದು ಜಾರಿ ನಿರ್ದೇಶನಾಲಯ ಆರೋಪ ಪಟ್ಟಿಯಲ್ಲಿ ತಿಳಿಸಿದ್ದು, 2008-09ರ ಸಾಲಿನಲ್ಲಿ ಸುಮಾರು 1.2 ಕೋಟಿ ರುಗಳಷ್ಟು ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡು ಈ ಸಂಸ್ಥೆ ಖರೀದಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಇನ್ನು ಇದೇ ಪ್ರಕರಣ ಸಂಬಂಧ ಈ ಹಿಂದೆಯೇ ಅಂದರೆ ಡಿಸೆಂಬರ್ 23ರಂದು ಮೊದಲ ಆರೋಪಪಟ್ಟಿ ಸಿದ್ಧಪಡಿಸಲಾಗಿತ್ತು. ಈ ವೇಳೆ ದೆಹಲಿಯಲ್ಲಿರುವ ಮಿಸಾ ಭಾರ್ತಿ ಕುಟುಂಬದ ಫಾರ್ಮ್ ಹೌಸ್ ಅನ್ನೂ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದು, ಮಿಸಾ ಭಾರ್ತಿ ಹಾಗೂ ಆಕೆಯ ಪತಿ ಶೈಲೇಶ್ ಕುಮಾರ್ ವಿರುದ್ಧ ತನಿಖೆಗೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಇದೀಗ ಮತ್ತೆ ಇಡಿ ಆಧಿಕಾರಿಗಳು ಮಿಸಾಭಾರ್ತಿ ವಿರುದ್ಧ ಜಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಫೆಬ್ರವರಿ 5ರಂದು ಈ ಪ್ರಕರಣದ ವಿಚಾರಣೆಯನ್ನು ದೆಹಲಿಯ ಪಾಟಿಯಾಲಾ ಕೋರ್ಟ್ ವಿಚಾರಣೆ ನಡೆಸಲಿದೆ.
8 ಸಾವಿರ ಕೋಟಿ ರು. ಹವಾಲ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜುಲೈ ತಿಂಗಳಿನಲ್ಲಿ ಮಿಸಾಭಾರ್ತಿ ಅವರ ನಿವಾಸ, ಕಚೇರಿ ಸೇರಿದಂತೆ ಹಲವಾರು ಕಡೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಸುರೇಂದ್ರ ಕುಮಾರ್ ಹಾಗೂ ವೀರೇಂದ್ರ ಜೈನ್ ಎಂಬ ಇಬ್ಬರನ್ನು ಬಂಧಿಸಿತ್ತು. ಬಂಧಿತರು ಶೆಲ್ ಸಂಸ್ಥೆಗಳ (ನಾಮ್ ಕೇ ವಾಸ್ತೆ ಸಂಸ್ಥೆಗಳು) ಮೂಲಕ ಭಾರೀ ಪ್ರಮಾಣದಲ್ಲಿ ಅಕ್ರಮ ಹಣದ ವ್ಯವಹಾರದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiEnforcement Directoratemoney laundering caseಜಾರಿ ನಿರ್ದೇಶನಾಲಯಹವಾಲಾ ದಂಧೆMisa Bhartiಮಿಸಾ ಭಾರ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


