ಮೇವು ಹಗರಣ: ಲಾಲುಗೆ 3.5 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ವಿಶೇಷ ಕೋರ್ಟ್ 3.5 ವರ್ಷ...

Published On :
ರಾಂಚಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ವಿಶೇಷ ಕೋರ್ಟ್ 3.5 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು ಲಾಲುಗೆ 3.5 ವರ್ಷ ಜೈಲು ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ.
ಮೇವು ಹಗರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ಪೈಕಿ ಒಂದು ಪ್ರಕರಣದ 22 ಆರೋಪಿಗಳ ಪೈಕಿ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಕಳೆದ ಡಿಸೆಂಬರ್ 23ರಂದು ತೀರ್ಪು ನೀಡಿತ್ತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಜನವರಿ 3ಕ್ಕೆ ಕಾಯ್ದಿರಿಸಿತ್ತು. ಆದರೆ ನಿನ್ನೆ ಮೂರನೇ ಬಾರಿಗೆ ತೀರ್ಪನ್ನು ಮುಂದೂಡಿದ್ದು ಇಂದಿಗೆ ತೀರ್ಪನ್ನು ಕಾಯ್ದಿರಿಸಿದ್ದರು.
ಇದೇ ಪ್ರಕರಣ ಸಂಬಂದ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಸೇರಿ ಇತರೆ ಏಳು ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಖುಲಾಸೆಗೊಳಿಸಿದ್ದರು.
ದೇವಗಡ ಖಜಾನೆಯಿಂದ 90 ಲಕ್ಷ ರುಪಾಯಿ ಹಣವನ್ನು ಅಕ್ರಮವಾಗಿ ಪಡೆದುಕೊಂಡಿರುವ ಈ ಪ್ರಕರಣದಲ್ಲಿ ಲಾಲು ಹಾಗೂ ಮಿಶ್ರಾ ಸೇರಿ 22 ಮಂದಿ ಆರೋಪಿಗಳಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Lalu Prasad YadavCBIಸಿಬಿಐspecial courtಲಾಲು ಪ್ರಸಾದ್ ಯಾದವ್ವಿಶೇಷ ನ್ಯಾಯಾಲಯFodder scamಮೇವು ಹಗರಣShiv Pal Singhಶಿವಪಾಲ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


