ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಐಇಡಿ ಸ್ಫೋಟಕ್ಕೆ 4 ಪೊಲೀಸರ ಬಲಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡ ಪರಿಣಾಮ 4 ಮಂದಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡ ಪರಿಣಾಮ 4 ಮಂದಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನಲ್ಲಿ ಸುಧಾರಿತ ಸ್ಫೋಟಕ ಸ್ಫೋಟವಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಮೂವರು ಪೊಲೀಸರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯನ್ನು ಹಲವರು ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಘಟನೆ ವಿಚಾರ ತಿಳಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಂತೆಯೇ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರಶೋಧ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಉಗ್ರರ ಕೃತ್ಯ ಎಂದು ಶಂಕಿಸಲಾಗುತ್ತಿದ್ದು, ಹೆಚ್ಚಿನ ತನಿಖೆ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarPoliceಪೊಲೀಸ್ಜಮ್ಮು ಮತ್ತು ಕಾಶ್ಮೀರJammu and KashmirIED blastಭಾರತೀಯ ಸೇನೆಐಇಡಿ ಸ್ಫೋಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


