ಮಣಿಪುರ ನಕಲಿ ಎನ್ ಕೌಂಟರ್: ಕೇವಲ 11 ಎಫ್ಐಆರ್ ಏಕೆ?; ಸಿಬಿಐ, ಎಸ್ಐಟಿಗೆ ಸುಪ್ರೀಂ ತರಾಟೆ
ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದಿದ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ.....

Published On :
ನವದೆಹಲಿ: ಮಣಿಪುರದಲ್ಲಿ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪೊಲೀಸರಿಂದ ನಡೆದಿದ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐ ಮತ್ತು ವಿಶೇಷ ತನಿಖಾ ತಂಡ(ಎಸ್ ಐಟಿ) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಸಿಬಿಐ ಹಾಗೂ ಎಸ್ ಐಟಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ನಕಲಿ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಲ್ಲಿ ಕೇವಲ 11 ಎಫ್ಐಆರ್ ಗಳನ್ನು ದಾಖಲಿಸಿದ್ದು ಏಕೆ ಎಂದು ಕೋರ್ಟ್ ತನಿಖಾ ಸಂಸ್ಥೆಗಳನ್ನು ಪ್ರಶ್ನಿಸಿದೆ. ಅಲ್ಲದೆ ಈ ಸಂಬಂಧ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಡಿಐಜಿಗೆ ಸೂಚಿಸಿದೆ.
ಮಣಿಪುರದಲ್ಲಿ 2000ದಿಂದ 2012ರವರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರಿಂದ 1,528 ಕೈದಿಗಳ ಎನ್ ಕೌಂಟರ್ ಗೆ ಸಂಬಂಧಪಟ್ಟಂತೆ ತನಿಖೆ ನಡೆಸುವಂತೆ ನ್ಯಾಯಾಧೀಶರಾದ ಎಂ.ಬಿ.ಲೋಕೂರ್ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ಸಿಬಿಐಗೆ ಸೂಚಿಸಿತ್ತು. ಅಲ್ಲದೆ ಈ ಸಂಬಂಧ ಅಧಿಕಾರಿಗಳ ವಿಶೇಷ ತನಿಖಾ ತಂಡವೊಂದನ್ನು ರಚಿಸುವಂತೆ ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


