ವಿಜಯನ್ ಪಿಣರಾಯಿಯನ್ನು ಮೋದಿ, ಟ್ರಂಪ್ ಗೆ ಹೋಲಿಕೆ ಮಾಡಿದ ಸಿಪಿಐ ನಾಯಕ
ಕೇರಳದ ಸಿಪಿಐ ನಾಯಕರೊಬ್ಬರು ಮುಖ್ಯಮಂತ್ರಿ ವಿಜಯ್ ಪಿಣರಾಯಿಯನ್ನು ಪ್ರಧಾನಿ ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಅವರಿಗೆ ಹೋಲಿಕೆ ಮಾಡಿದ್ದಾರೆ.

Published On :
ತಿರುವನಂತಪುರಂ:ಕೇರಳದ ಸಿಪಿಐ ನಾಯಕರೊಬ್ಬರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನ್ನು ಪ್ರಧಾನಿ ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಅವರಿಗೆ ಹೋಲಿಕೆ ಮಾಡಿದ್ದಾರೆ.
ಕೇರಳ ಸಿಎಂ ವಿಜಯನ್ ಪಿಣರಾಯಿ, ಪ್ರಧಾನಿ ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್ ಎಲ್ಲರೂ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ಸಿಪಿಐ ನಾಯಕ, ಶಾಸಕ ರಾಜಾಜೀ ಮಾಥ್ಯೂ ಥಾಮ್ಸನ್ ಹೇಳಿದ್ದಾರೆ. ಕೇರಳದ ಯಾವ ಮುಖ್ಯಮಂತ್ರಿಯೂ ಸಹ ಮಾಧ್ಯಮಗಳಿಗೆ ಗೆಟ್ ಔಟ್(ಹೊರ ಹೋಗಿ) ಎಂದು ಹೇಳಿಲ್ಲ, ಮೋದಿ ಹಾಗೂ ಡೊನಾಲ್ಡ್ ಟ್ರಂಪ್ ಮಾಡಿದನ್ನೇ ವಿಜಯ್ ಸಹ ಮಾಡುತ್ತಿದ್ದಾರೆ ಎಂದು ಸಿಪಿಐ ನ ಮುಖವಾಣಿ ಪತ್ರಿಕೆಯ ಸಂಪಾದಕರೂ ಆಗಿರುವ ರಾಜಾಜೀ ಥಾಮಸ್ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳನ್ನು ದೂರವಿಡುವುದು ಅಹಿತಕರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಥಾಮಸ್ ಹೇಳಿದ್ದಾರೆ. ಕಳೆದ ವರ್ಷ ವಿಜಯ್ ಪಿಣರಾಯಿ ತಮ್ಮ ನೇತೃತ್ವದ ಸಭೆಯಿಂದ ಹೊರಹೋಗುವಂತೆ ಮಾಧ್ಯಮಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಜಯ್ ಪಿಣರಾಯಿ ವಿರುದ್ಧ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


