ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ; ಆದೇಶ ಮರುಪರಿಶೀಲಿಸುವಂತೆ 'ಸುಪ್ರೀಂ'ಗೆ ಕೇಂದ್ರದ ಮನವಿ
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿಕೊಂಡಿದೆ.

Published On :
ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿಕೊಂಡಿದೆ.
ಪ್ರಸ್ತುತ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸದಂತೆ ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ್ದು, ಈ ಸಂಬಂಧ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಸಚಿವರ ಸಮಿತಿ ರಚನೆ ಮಾಡುವುದಾಗಿ ಹೇಳಿಕೆ ನೀಡಿದೆ.
ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಸಚಿವಾಲಯದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಲಾಗಿದ್ದು, ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಮನವಿ ಮಾಡಿಕೊಂಡಿದೆ. 2016ರ ಸನವೆಂಬರ್ ನಲ್ಲಿ ಮೊದಲ ಬಾರಿಗೆ ಈ ಸಂಬಂಧ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಬಳಿಕ ಇದಕ್ಕೆ ವ್ಯಾಪಕ ಪರ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವವು. ಬಳಿಕ ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂಕೋರ್ಟ್ ಮತ್ತೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.
ಇದೀಗ ಈ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಸಚಿವರ ಸಮಿತಿ ರಚನೆ ಮಾಡಿ ಅಗತ್ಯ ಮಾರ್ಗದರ್ಶಕ ಸೂಚನೆಗಳ ಸಿದ್ಧಪಡಿಸಲು ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್PM Modiಪ್ರಧಾನಿ ಮೋದಿಕೇಂದ್ರ ಸರ್ಕಾರnational anthemರಾಷ್ಟ್ರಗೀತೆunion Government
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


