ದೇಶ

ಸಿಜೆಐ ವಿರುದ್ಧ ಸಿಡಿದೆದ್ದ ನ್ಯಾಯಾಧೀಶರು: ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು- ಸುಬ್ರಮಣಿಯನ್ ಸ್ವಾಮಿ

ಸುಪ್ರೀಂಕೋರ್ಟ್ ಆಡಳಿತ ವ್ಯವಸ್ಥೆ ಹಾಗೂ ಸಿಜೆಐ ದೀಪಕ್ ಮಿಶ್ರಾ ವಿರುದ್ಧ ನ್ಯಾಯಾಧೀಶರು ಆರೋಪ ಮಾಡಿರುವ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಶನಿವಾರ ಹೇಳಿದ್ದಾರೆ...

ಸಿಜೆಐ ವಿರುದ್ಧ ಸಿಡಿದೆದ್ದ ನ್ಯಾಯಾಧೀಶರು: ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು- ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
Published On :
ನವದೆಹಲಿ: ಸುಪ್ರೀಂಕೋರ್ಟ್ ಆಡಳಿತ ವ್ಯವಸ್ಥೆ ಹಾಗೂ ಸಿಜೆಐ ದೀಪಕ್ ಮಿಶ್ರಾ ವಿರುದ್ಧ ನ್ಯಾಯಾಧೀಶರು ಆರೋಪ ಮಾಡಿರುವ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಸುಪ್ರೀಂಕೋರ್ಟ್ ವಿರುದ್ಧ ಆರೋಪ ಮಾಡುತ್ತಿರುವ ನ್ಯಾಯಾಧೀಶರ ಕುರಿತು ನಾವು ಟೀಕೆ ಮಾಡುವುದು ಸರಿಯಲ್ಲ. ದೊಡ್ಡ ಸಮಗ್ರತೆ ಹೊಂದಿರುವ ವ್ಯಕ್ತಿಗಳಾಗಿದ್ದು, ಕಾನೂನು ಭವಿಷ್ಯಕ್ಕೆ ಸಾಕಷ್ಟು ತ್ಯಾಗಗಳನ್ನು ಮಾಡಿದ್ದಾರೆ. ಅವರನ್ನು ನಾನು ಗೌರವಿಸಬೇಕು. ಇಂತಹ ನ್ಯಾಯಾಧೀಶರು ವಿಚಾರದ ವಿರುದ್ಧ ದನಿ ಎತ್ತಿದ್ದಾರೆಂದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಹೇಳಿದ್ದಾರೆ. 
ಹಿರಿಯ ನ್ಯಾಯಾಧೀಶರು ದೇಶದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರವನ್ನು ಮುಂದಿಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಿಜೆಐ, ಸುಪ್ರೀಂಕೋರ್ಟ್ ಎಲ್ಲರೂ ಒಮ್ಮತಕ್ಕೆ ಬರಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.