ಶಿವಸೇನೆ ಮಾಜಿ ಕಾರ್ಪೋರೇಟರ್ ಹತ್ಯೆ: ಮಾಸ್ಟರ್ ಮೈಂಡ್ ಆರ್‌ಟಿಐ ಕಾರ್ಯಕರ್ತನ ಬಂಧನ
ಶಿವಸೇನೆ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರ್‌ಟಿಐ ಕಾರ್ಯಕರ್ತನೋರ್ವನನ್ನು ಬಂಧಿಸಿದ್ದಾರೆ...

Published On :
ಮುಂಬೈ: ಶಿವಸೇನೆ ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರ್‌ಟಿಐ ಕಾರ್ಯಕರ್ತನೋರ್ವನನ್ನು ಬಂಧಿಸಿದ್ದಾರೆ.
ಅಶೋಕ್ ಸಾವಂತ್ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಅನಿಲ್ ವಾಘಮಾರೆ ಎಂಬಾತನನ್ನು ಬಂಧಿಸಲಾಗಿದ್ದು ಇತ ನಗರ ಹೊರವಲಯದ ಕಾಂದಿವಿಲಿಯಲ್ಲಿ ಪೌರ ಸೇವಾ ಪರೀಕ್ಷೆಗಳ ಮಾರ್ಗದರ್ಶನ ಕೇಂದ್ರವೊಂದನ್ನು ನಡೆಸುತ್ತಿದ್ದ ಎಂದು ಪೊಲೀಸ್ ಉಪ ಕಮಿಷನರ್ ವಿನಯ್ ರಾಥೋಡ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಅನಿಲ್ ವಾಘಮೊರೆ ಬಂಧಿತ ನಾಲ್ಕನೇ ಆರೋಪಿಯಾಗಿದ್ದಾನೆ. ಸಾವಂತ್ ಗೂ ಮತ್ತು ವಾಘಮೊರೆಗೂ ಹಲವು ವಿಚಾರದಲ್ಲಿ ವೈಯಕ್ತಿಕ ದ್ವೇಷವಿದ್ದು ಸಾವಂತ್ ಕೊಲೆಗೆ ಯೋಜನೆ ಸಿದ್ಧಪಡಿಸಿದ್ದ ಎಂದು ವಿನಯ್ ರಾಥೋಡ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶಿವಸೇನೆಮಹಾರಾಷ್ಟ್ರMaharashtraShiv SenaRTI activistಮಾಜಿ ಕಾರ್ಪೋರೇಟರ್ex-corporatorಆರ್‌ಟಿಐ ಕಾರ್ಯಕರ್ತAshok Sawantಅಶೋಕ್ ಸಾವಂತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


