ನ್ಯಾಯಮೂರ್ತಿಗಳ ಸುದ್ದಿಗೋಷ್ಠಿ: ಪ್ರಧಾನಮಂತ್ರಿ ಕಚೇರಿಗೆ ಸಚಿವ ರವಿಶಂಕರ್ ಪ್ರಸಾದ್ ಭೇಟಿ
ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದ ಸುಪ್ರೀಂಕೋರ್ಟ್ ನ್ಯಾಯಾಧೀಶರು ನ್ಯಾಯಾಂಗ ವ್ಯವಸ್ಥೆ ಕುರಿತು ಅಸಮಾಧಾನವನ್ನು ಹೊರಹಾಕಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಚೇರಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್...

Published On :
ನವದೆಹಲಿ: ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದ ಸುಪ್ರೀಂಕೋರ್ಟ್ ನ್ಯಾಯಾಧೀಶರು ನ್ಯಾಯಾಂಗ ವ್ಯವಸ್ಥೆ ಕುರಿತು ಅಸಮಾಧಾನವನ್ನು ಹೊರಹಾಕಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಚೇರಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಭೇಟಿ ನೀಡುತ್ತಿದ್ದು, ಮಾತುಕತೆ ನಡೆಸಲಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಸಿಜೆಐ ದೀಪಕ್ ಮಿಶ್ರಾ ಕುರಿತಂತೆ ಬಹಿರಂಗವಾಗಿಯೇ ನ್ಯಾಯಾಧೀಶರು ಅಸಮಾಧಾನ ಹೊರ ಹಾಕಿರುವ ಹಿನ್ನಲೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹಾಗೂ ಕಾನೂನು ಖಾತೆಯ ಸಹಾಯಕ ಸಚಿವ ಪಿ.ಪಿ. ಚೌಧರಿವಯುರ ಪ್ರಧಾನಮಂತ್ರಿಗಳ ಕಚೇರಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.
ಈ ಎಲ್ಲಾ ಬೆಳವಣಿಗೆಗಳ ನಡುವಲ್ಲೇ ಸಿಜೆಐ ದೀಪಕ್ ಮಿಶ್ರಾ ಅವರು ಮಹತ್ವದ ಸಭೆಯೊಂದನ್ನು ಕರೆದಿದ್ದು, ಇಂದು ಮಧ್ಯಾಹ್ನ 1.30ಕ್ಕೆ ಸಮಾಲೋಚನೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರನ್ನು ಕರೆದಿರುವ ದೀಪಕ್ ಮಿಶ್ರಾ ಅವರು, ನ್ಯಾಯಾಧೀಶರ ದಿಢೀರ್ ಸುದ್ದಿಗೋಷ್ಠಿ ಕುರಿತಂತೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್PMOpress conferenceಸುದ್ದಿಗೋಷ್ಠಿjudgesRavi Shankar Prasadರವಿಶಂಕರ್ ಪ್ರಸಾದ್ನ್ಯಾಯಾಧೀಶರುಪ್ರಧಾನಮಂತ್ರಿಗಳ ಕಚೇರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


