ದೇಶ

ನ್ಯಾಯಾಂಗದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಕೇಂದ್ರ ಸರ್ಕಾರ

ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಾಧೀಶರು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯವಾಗಿದ್ದು ಇದರಲ್ಲಿ...

ನ್ಯಾಯಾಂಗದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸುದ್ದಿಗೋಷ್ಠಿ
Published On :
ನವದೆಹಲಿ: ಸುಪ್ರೀಂಕೋರ್ಟ್ ನ ನಾಲ್ವರು ನ್ಯಾಯಾಧೀಶರು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯವಾಗಿದ್ದು ಇದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರದೇಶಿಸುವ ಸಾಧ್ಯತೆ ಕಡಿಮೆ ಇದೆ ಎಂದು ಕೇಂದ್ರ ಕಾನೂನು ಸಚಿವಾಲಯದ ಮೂಲಗಳು ತಿಳಿಸಿವೆ. 
ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಅಲ್ಲದೆ ಸುಪ್ರೀಂ ಕೋರ್ಟ್ ತನ್ನಲ್ಲಿರುವ ಸಮಸ್ಯೆಗಳನ್ನು ತಾನೇ ಪರಿಹರಿಸಿಕೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ. 
ನ್ಯಾಯಾಂಗ ವ್ಯವಸ್ಥೆಯ ಆಂತರಿಕ ಸಮಸ್ಯೆಯಿಂದಾಗಿ ದೇಶದ ಜನತೆ ಸುಪ್ರೀಂ ಕೋರ್ಟ್ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. 
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಕುರಿತಂತೆ ನ್ಯಾಯಮೂರ್ತಿಗಳಾದ ಜೆ ಚೆಲಮೇಶ್ವರ್, ರಂಜನ್ ಗೊಗೈಯ್, ಎಂಬಿ ಲೋಕೂರ್ ಮತ್ತು ಕುರೈನ್ ಜೋಸೆಫ್  ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.