ವಿವಿಧ ಬೇಡಿಕೆಗೆ ಆಗ್ರಹಿಸಿ ಶಾಲಾ ಶಿಕ್ಷಕಿಯರಿಂದ ಸಾಮೂಹಿಕ ಕೇಶ ಮುಂಡನ!
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನೂರಾರು ಶಾಲಾ ಶಿಕ್ಷಕಿಯರು ಸಾಮೂಹಿಕವಾಗಿ ತಲೆ ಬೋಳಿಸಿಕೊಂಡು ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಕೈಗೊಂಡಿರುವ...

Published On :
ಭೋಪಾಲ್: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನೂರಾರು ಶಾಲಾ ಶಿಕ್ಷಕಿಯರು ಸಾಮೂಹಿಕವಾಗಿ ತಲೆ ಬೋಳಿಸಿಕೊಂಡು ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಕೈಗೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.
ಅಧ್ಯಾಪಕ್ ಅಧಿಕಾರ್ ಯಾತ್ರಾ ಮೂಲಕ ನೂರಾರು ಶಿಕ್ಷಕರು ಮತ್ತು ಶಿಕ್ಷಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಸಮಾನ ವೇತನ, ಸಮಾನ ಕೆಲಸ ಮತ್ತು ವರ್ಗಾವಣೆ ನೀತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.
ಶಿಕ್ಷಕರು ಮತ್ತು ಶಿಕ್ಷಕಿಯರು ಪ್ರತಿಭಟನೆಯನ್ನೂ ತೀವ್ರಗೊಳಿಸಿದ್ದು ಪ್ರತಿಭಟನಾನಿರತ ಸ್ಥಳದಲ್ಲೇ ತಲೆ ಬೋಳಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಮುಂದಿನ ದಿನಗಳಲ್ಲಿ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಶಿಕ್ಷಕರ ಸಂಘಟನೆ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರತಿಭಟನೆprotestBhopalಭೋಪಾಲ್teachersಶಿಕ್ಷಕಿಯರುShavedHeadsAdhyapak Adhikar Yatraಕೇಶ ಮುಂಡನಅಧ್ಯಾಪಕ್ ಅಧಿಕಾರ್ ಯಾತ್ರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


