ದೇಶ

ಮೇವು ಹಗರಣ: ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಲಾಲು, ಜಾಮೀನಿಗೂ ಮನವಿ

ಬಹುಕೋಟಿ ಮೇವು ಹಗರಣದಲ್ಲಿ ಮೂರುವರೆ ವರ್ಷ ಜೈಲು ಶಿಕ್ಷೆ ಗುರಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ....

ಮೇವು ಹಗರಣ: ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಲಾಲು, ಜಾಮೀನಿಗೂ ಮನವಿ
ಲಾಲು ಪ್ರಸಾದ್ ಯಾದವ್
Published On :
ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಮೂರುವರೆ ವರ್ಷ ಜೈಲು ಶಿಕ್ಷೆ ಗುರಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಶನಿವಾ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಜಾರ್ಖಂಡ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. 
ಸಿಬಿಐ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಕೋರ್ಟ್ ಜನವರಿ 19ಕ್ಕೆ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಲಾಲು ಪರ ವಕೀಲ ಚಿತ್ತರಂಜನ್ ಸಿನ್ಹಾ ಅವರು ಹೇಳಿದ್ದಾರೆ. 
ಸಿಬಿಐ ಕೋರ್ಟ್ ತೀರ್ಪಿಗೆ ತಕ್ಷಣ ತಡೆ ನೀಡಿ, ಆರೋಪಿಗೆ ಜಾಮೀನು ನೀಡಬೇಕು ಎಂದು ಲಾಲು ಪರ ವಕೀಲರು ಮನವಿ ಮಾಡಿದ್ದಾರೆ.
ಜನವರಿ 6ರಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಲಾಲುಗೆ 3.5 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ. 
ಮೇವು ಹಗರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ಪೈಕಿ ಒಂದು ಪ್ರಕರಣದ 22 ಆರೋಪಿಗಳ ಪೈಕಿ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಕಳೆದ ಡಿಸೆಂಬರ್ 23ರಂದು ತೀರ್ಪು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.