ಚಿಕ್ಕಬಳ್ಳಾಪುರ: ಸೇಬು ತಿಂದು ಸಾವನ್ನಪ್ಪಿದ 11 ವರ್ಷದ ಬಾಲಕ!
ಗಂಟಲಲ್ಲಿ ಸೇಬು ಹಣ್ಣು ಸಿಕ್ಕಿ ಹಾಕಿಕೊಂಡು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Published On :
ಚಿಕ್ಕಬಳ್ಳಾಪುರ: ಗಂಟಲಲ್ಲಿ ಸೇಬು ಹಣ್ಣು ಸಿಕ್ಕಿ ಹಾಕಿಕೊಂಡು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ನಕ್ಕಲಕುಂಟೆಯ ಶಾಂತಿನಗರದ ನಿವಾಸಿ ಕಿಜರ್ ಎಂಬುವರ ಪುತ್ರ ಆಸಿಫ್ (11 ವರ್ಷ) ಎಂಬ ಬಾಲಕ ಸೇಬು ಹಣ್ಣು ತಿಂದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಇತ್ತೀಚೆಗೆ ಮರದಿಂದ ಬಿದ್ದು ಕಾಲಿಗೆ ಗಾಯ ಮಾಡಿಕೊಂಡು ಜ್ವರದಿಂದ ಬಳಲುತ್ತಿದ್ದ ಆಸಿಫ್, ಚಿಕಿತ್ಸೆ ಪಡೆಯುತ್ತ ಮನೆಯಲ್ಲಿಯೇ ಇದ್ದ. ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸೇಬು ಹಣ್ಣು ತಿನ್ನುವ ವೇಳೆ ಏಕಾಏಕಿ ಕುಸಿದು ಬಿದ್ದು ಆಸಿಫ್ ಅಸ್ವಸ್ಥಗೊಂಡಿದ್ದ. ಕೂಡಲೇ ಪೋಷಕರು ಆಸಿಫ್ ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಿಜರ್ ಅವರು ಈ ಬಗ್ಗೆ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಆಸಿಫ್ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಜಿಲ್ಲಾ ಆಸ್ಪತ್ರೆಯ ವೈದ್ಯರು ಗಂಟಲಿನಲ್ಲಿ ಸೇಬು ಸಿಕ್ಕಿಹಾಕಿಕೊಂಡಿದ್ದರಿಂದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ಮೌಖಿಕವಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಜ್ವರದಿಂದ ಸುಸ್ತಾಗಿದ್ದ ಆಸಿಫ್ ಗೆ ಪೋಷಕರು ತಿನ್ನವು ಆ್ಯಪಲ್ ನೀಡಿದ್ದರಂತೆ..ಆದರೆ ಅದು ಗಂಟಲಲ್ಲೇ ಸಿಕ್ಕಿ ಹಾಕಿಕೊಂಡು ಆಸಿಫ್ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಂತೆಯೇ ಯಾವುದೇ ಹಣ್ಣು ಅಥವಾ ಆಹಾರವಿರಲಿ ಚೆನ್ನಾಗಿ ಅಗೆದು ತಿನ್ನುವುದು ಉತ್ತಮ ಎಂದೂ ವೈದ್ಯರು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


