ಮಕರ ಸಂಕ್ರಾಂತಿ ಸಂಭ್ರಮ, ದೇಶದ ಜನತೆಗೆ ಶುಭಾಶಯ ಹೇಳಿದ ಮೋದಿ
ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಹಬ್ಬದ ಸಂಭ್ರಮದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.

Published On :
ನವದೆಹಲಿ: ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಹಬ್ಬದ ಸಂಭ್ರಮದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮೋದಿ ಶುಭಾಶಯ ಹೇಳಿದ್ದು "ಮಕರ ಸಂಕ್ರಾಂತಿ ಸಂದರ್ಭದಲ್ಲಿ, ನಾನು ಎಲ್ಲಾ ಜನರಿಗೂ ನನ್ನ ಶುಭಾಶಯಗಳನ್ನು ಹೇಳುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
i
ಮಾಘ ಬಿಹು ಸಂದರ್ಭದಲ್ಲಿ ದೇಶದ ಜನರಿಗೆ ಶುಭ ಕೋರಿದ ಪ್ರಧಾನಿ "ಈ ಹಬ್ಬವು ಸಹೋದರತ್ವದ ಬಂಧವನ್ನು ಬಲಪಡಿಸುತ್ತದೆ ಮತ್ತು ನಮ್ಮ ಸಮಾಜವನ್ನು ಹೆಚ್ಚು ಸಂತೋಷ ಮತ್ತು ಸಮೃದ್ಧಗೊಳಿಸುತ್ತದೆ" ಎಂದು ಹೇಳಿದ್ದಾರೆ.
ಇಂದು ದೇಶದಾದ್ಯಂತ ಮಕರ ಸಂಕ್ರಾಂತಿ, ಉತ್ತರಾಯಣ ಪ್ರಾರಂಭದ ಹಬ್ಬವನ್ನು ಆಚರಿಸಲಾಗುತ್ತಿದ್ದು ದೇವಾಲಯಗಳಿಗೆ ತೆರಳಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಮನೆಯಲ್ಲಿ ಎಳ್ಳು-ಬೆಲ್ಲ, ಸಿಹಿ ತಿನಿಸು ಮಾಡಿ ಮನೆ ಮನೆಗೆ ಹಂಚುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


