ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಲೋಡ್ ಶೆಡ್ಡಿಂಗ್: ವ್ಯಾಪಾರಿಗಳಿಂದ ಪ್ರತಿಭಟನೆ
ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಮಿತಿಮೀರಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ವ್ಯಾಪಾರಿಗಳು ನೀಲಮ್ ಕಣಿವೆ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

Published On :
ಮುಜಾಫರಾಬಾದ್: ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ನಲ್ಲಿ ಮಿತಿಮೀರಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ವ್ಯಾಪಾರಿಗಳು ನೀಲಮ್ ಕಣಿವೆ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಆಕ್ರೋಶಗೊಂಡಿರುವ ವ್ಯಾಪಾರಿಗಳು ಟ್ರಾನ್ಸ್ಫಾರ್ಮರ್ ಗಳಿಗೆ ಹಾನಿಯುಂಟುಮಾಡಿದ್ದು, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಜಾಫರಾಬಾದ್ ನ ಅಂಜುಮನ್ ತಾಜಿರಾನ್ ವ್ಯಾಪಾರಿಗಳ ಯೂನಿಯನ್ ಪ್ರತಿಭಟನೆ ಮಾಡಿದ್ದು, ವಿದ್ಯುತ್ ಕಡಿತದಿಂದ ವ್ಯಾಪಾರಕ್ಕೆ ಅಪಾರ ಹಾನಿ ಉಂಟಾಗುತ್ತಿದೆ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ, ಆದರೆ ಅದಕ್ಕೆ ಅವರು ಸ್ಪಂದಿಸುತ್ತಿಲ್ಲ. ಪಿಎಂಎಲ್(ಎನ್) ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಮಸ್ಯೆಗಳು ಹೆಚ್ಚಾಗಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರತಿಭಟನೆprotesttradersವ್ಯಾಪಾರಿಗಳುಪಾಕ್ ಆಕ್ರಮಿತ ಕಾಶ್ಮೀರPakistan Occupied KashmirMuzaffarabadಮುಜಾಫರಾಬಾದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


