ಉರಿ ಸೆಕ್ಟರ್ ನಲ್ಲಿ ಐದು ಉಗ್ರರ ಹತ್ಯೆಗೈದ ಭಾರತೀಯ ಸೇನೆ, 6ನೇ ಉಗ್ರನ ಶವಕ್ಕಾಗಿ ಶೋಧ
2016ರ ಉರಿ ಸೆಕ್ಟರ್ ಮೇಲಿನ ದಾಳಿ ರೂಪದಲ್ಲೇ ಮತ್ತೊಂದು ಭೀಕರ ಉಗ್ರ ದಾಳಿಯ ಯೋಜನೆಯೊಂದಿಗೆ ಭಾರತದ ಗಡಿ ಪ್ರವೇಶ ಮಾಡಿದ್ದ ನಾಲ್ಕು ಮಂದಿ ಉಗ್ರರನ್ನು ಭಾರತೀಯ ಸೇನೆ ಸೋಮವಾರ ಸೆದೆಬಡಿದಿದೆ.

Published On :
ಶ್ರೀನಗರ: 2016ರ ಉರಿ ಸೆಕ್ಟರ್ ಮೇಲಿನ ದಾಳಿ ರೂಪದಲ್ಲೇ ಮತ್ತೊಂದು ಭೀಕರ ಉಗ್ರ ದಾಳಿಯ ಯೋಜನೆಯೊಂದಿಗೆ ಭಾರತದ ಗಡಿ ಪ್ರವೇಶ ಮಾಡಿದ್ದ ಐದು ಮಂದಿ ಉಗ್ರರನ್ನು ಭಾರತೀಯ ಸೇನೆ ಸೋಮವಾರ ಸೆದೆಬಡಿದಿದೆ.
ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಇಂದು ಬೆಳಗ್ಗೆ ಅಕ್ರಮವಾಗಿ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದೆ ಐದೂ ಮಂದಿ ಆತ್ಮಹತ್ಯಾ ದಾಳಿಕೋರ ಉಗ್ರರನ್ನು ಭಾರತೀಯ ಸೇನೆಯ ಸೈನಿಕರು ಹೊಡೆದುರುಳಿಸಿದ್ದಾರೆ. ಅಂತೆಯೇ ಮತ್ತೋರ್ವ ಉಗ್ರನ ಶವಕ್ಕಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಸೇನಾಧಿಕಾರಿಗಳು ತಿಳಿಸಿರುವಂತೆ, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ದುಲಾಂಜ ಪ್ರಾಂತ್ಯದಲ್ಲಿ ಒಳನುಸುಳುತ್ತಿದ್ದ ಐದಕ್ಕೂ ಅಧಿಕ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ಸೇನೆ, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಇನ್ನು ಘಟನಾ ಸ್ಥಳದಲ್ಲಿ ಉಗ್ರರ ಬಳಿ ಇದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತೆಯೇ ಸ್ಥಳದ್ಲಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಮೇರೆಗೆ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
2016ರ ಸೆಪ್ಟೆಂಬರ್ 18ರಂದು ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದ ಉಗ್ರರು 19 ಮಂದಿ ಸೈನಿಕರನ್ನು ಕೊಂದು ಹಾಕಿದ್ದರು. ಈ ವೇಳೆ ನಾಲ್ಕು ಉಗ್ರರನ್ನು ಕೊಲ್ಲಲಾಗಿತ್ತಾದರೂ ಸೈನಿಕರ ಸಾವು ಹೆಚ್ಚಿನ ಪ್ರಮಾಣದಲ್ಲಿತ್ತು. ಇದರ ಬೆನ್ನಲ್ಲೇ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಅಲ್ಲಿನ ಉಗ್ರ ಕ್ಯಾಂಪ್ ಗಳನ್ನು ಧ್ವಂಸ ಮಾಡಿದ್ದಲ್ಲದೇ 60ಕ್ಕೂ ಹೆಚ್ಚು ಉಗ್ರರನ್ನು ಕೊಂದು ಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


