ದೇಶ

ಕಸ ತುಂಬುವ ವಾಹನದಲ್ಲಿ ಪತ್ರಕರ್ತನ ಮೃತದೇಹ: ವರದಿ ಕೇಳಿದ ಮುಖ್ಯಮಂತ್ರಿ

ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ವರದಿಗಾರನ ಮೃತದೇಹವನ್ನು ಕಸ ತುಂಬುವ ವಾಹನದಲ್ಲಿ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ವರದಿ ಕೇಳಿದ್ದಾರೆ.

ಕಸ ತುಂಬುವ ವಾಹನದಲ್ಲಿ ಪತ್ರಕರ್ತನ ಮೃತದೇಹ: ವರದಿ ಕೇಳಿದ ಮುಖ್ಯಮಂತ್ರಿ
ಸಿಎಂ
Published On :
ಬಳ್ಳಾರಿ: ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ವರದಿಗಾರನ ಮೃತದೇಹವನ್ನು ಕಸ ತುಂಬುವ ವಾಹನದಲ್ಲಿ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ವರದಿ ಕೇಳಿದ್ದಾರೆ. 
ಮೌನೇಶ ಪೋತರಾಜ್(28) ಎಂಬವರು ಶನಿವಾರ ರಾತ್ರಿ ಹಾನಗಲ್ ನ ಗಂಡೂರು ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಪೋತರಾಜ್ ಅವರ ಮೃತದೇಹವನ್ನು ಹಾನಗಲ್ ಪುರಸಭೆಯ ಕಸ ತುಂಬುವ ಟ್ರ್ಯಾಕ್ಟರ್ ನಲ್ಲಿ ರವಾನೆ ಮಾಡಲಾಗಿತ್ತು. ಈ ಸಂಬಂಧ ಉತ್ತರ ವಲಯದ ಐಜಿಪಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. 
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಘಟನೆ ಬಗ್ಗೆ ತಿಳಿದು ನೋವಾಗಿದೆ, ಉತ್ತರ ವಿಭಾಗದ ಎಡಿಜಿಪಿ ಹಾಗೂ ಸಂಚಾರಿ ವಿಭಾಗದ ಕಮಿಷನರ್ ಅವರಿಂದ ವರದಿ ಕೇಳಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.