ಕಾಂಗ್ರೆಸ್-ಬರ ಅವಳಿ ಸಹೋದರರಿದ್ದಂತೆ, ಕಾಂಗ್ರೆಸ್ ಹೋದಲ್ಲೆಲ್ಲಾ ಬರವೂ ಇರುತ್ತೆ: ಮೋದಿ
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯ ಧಾಟಿಯಲ್ಲಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಹಾಗೂ ಬರ ಎರಡೂ ಅವಳಿ ಸಹೋದರರಿದ್ದಂತೆ, ಕಾಂಗ್ರೆಸ್ ಹೋದಲ್ಲೆಲ್ಲಾ ಬರವೂ ಇದ್ದೇ ಇರುತ್ತದೆ...

Published On :
ಬಾರ್ಮರ್: ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯ ಧಾಟಿಯಲ್ಲಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಹಾಗೂ ಬರ ಎರಡೂ ಅವಳಿ ಸಹೋದರರಿದ್ದಂತೆ, ಕಾಂಗ್ರೆಸ್ ಹೋದಲ್ಲೆಲ್ಲಾ ಬರವೂ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.
ರಾಜಸ್ತಾನದ ಬಾರ್ಮರ್ ನಲ್ಲಿ ತೈಲ ಸಂಸ್ಕರಣಾಗಾರ ಉದ್ಘಾಟನೆ ಮಾಡಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೆಲವರು ಬಾರ್ಮರ್ ಸಂಸ್ಕರಣಾಗಾರದ ಬಗ್ಗೆ ಜನರನ್ನು ದಾರಿ ತಪ್ಪಿಸಿದ್ದರು, ಅಂತಹವರು ದೇಶವನ್ನು ವರ್ಷಗಳ ಕಾಲ ವಿವಿಧ ವಿಷಯಗಳಲ್ಲಿ ದಾರಿ ತಪ್ಪಿಸಿದ್ದಾರೆ.
ಇದೇ ವೇಳೆ ಒಆರ್ ಒಪಿ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ 40 ವರ್ಷಗಳಲ್ಲಿ ಒಆರ್ ಒಪಿಗೆ ಸಂಬಂಧಿಸಿದಂತೆ ಏನನ್ನೂ ಮಾಡಲಿಲ್ಲ,. 2014 ರ ಚುನಾವಣೆಗೂ ಮುನ್ನ ಹಣ ಬಿಡುಗಡೆ ಮಾಡಿದ್ದರು, ಆ ಮೊತ್ತ ಅಧಿಕೃತ ಪಿಂಚಣಿ ಪಡೆಯುವವರ ಅಂಕಿ-ಅಂಶಗಳಿಗೆ ಸರಿ ಹೊಂದುವುದಿಲ್ಲ ಎಂದು ತಿಳಿದಿದ್ದರೂ ಕಾಟಾಚಾರಕ್ಕೆ ಹಣ ಬಿಡುಗಡೆ ಮಾಡಿದ್ದರು, ಆದರೆ ಒಆರ್ ಒಪಿಗೆ ಬದ್ಧತೆ ತೋರಿ ಅದನ್ನು ನಿಜ ಮಾಡಿದ್ದು ನಾವು ಎಂದು ಮೋದಿ ಹೇಳಿದ್ದಾರೆ.
ಕೇವಲ ಚಪ್ಪಾಳೆಗಳಿಗಾಗಿ ಕೆಲವರು ಈಡೇರಿಸಲಾಗದ ಭರವಸೆಗಳನ್ನು ನೀಡಿದ್ದರು, ಈ ಮೂಲಕ ಜನರನ್ನು ದಾರಿ ತಪ್ಪಿಸುವ ಸಂಸ್ಕೃತಿಯನ್ನೇ ಸೃಷ್ಟಿಸಿದ್ದರು. ರಾಜಸ್ಥಾನದಲ್ಲಿ ಸಿಎಂ ವಸುಂಧರಾ ರಾಜೆ ಅವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಬರ ನಿರ್ವಹಣೆ ಮಾಡಿರುವ ರೀತಿ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


