ದಲಿತ ನಾಯಕ ಜಿಗ್ನೇಶ್ ಮೇವಾನಿ ಪತ್ರಿಕಾಗೋಷ್ಠಿ ಬಹಿಷ್ಕರಿಸಿದ ಪತ್ರಕರ್ತರು
ಆಂಗ್ಲ ಸುದ್ದಿವಾಹಿನಿಯೊಂದರ ಉಪಸ್ಥಿತಿಯಲ್ಲಿ ಮಾತನಾಡಲು ನಿರಾಕರಿಸಿದ ಗುಜರಾತ್ ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ....

Published On :
ಚೆನ್ನೈ: ಆಂಗ್ಲ ಸುದ್ದಿವಾಹಿನಿಯೊಂದರ ಉಪಸ್ಥಿತಿಯಲ್ಲಿ ಮಾತನಾಡಲು ನಿರಾಕರಿಸಿದ ಗುಜರಾತ್ ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸುವ ಮೂಲಕ ಪತ್ರಕರ್ತರು ಮಂಗಳವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಇಂದು ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲು ಮೇವಾನಿ ಒಪ್ಪಿಕೊಂಡಿದ್ದರು. ಈ ವೇಳೆ ಆಂಗ್ಲ ಸುದ್ದಿವಾಹಿನಿಯೊಂದರ ಪ್ರತಿನಿಧಿಗೆ ಹೊರಹೋಗುವಂತೆ ಮೇವಾನಿ ಸೂಚಿಸಿದ್ದು, ಇದರಿಂದ ಆಕ್ರೋಶಗೊಂಡ ಪತ್ರಕರ್ತರು ದಲಿತ ನಾಯಕನ ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿದ್ದಾರೆ.
ಆ ಸುದ್ದಿವಾಹಿನಿಯ ಪ್ರತಿನಿಧಿಯ ಉಪಸ್ಥಿತಿಯಲ್ಲಿ ತಾನು ಮಾತನಾಡುವುದಿಲ್ಲ, ಇದು ನನ್ನ ನೀತಿ, ಎಂದು ಮೇವಾನಿ ಹೇಳಿದ್ದಾರೆ. ಆದರೆ ಚೆನ್ನೈ ಪತ್ರಕರ್ತರಿಗೆ ಮೇವಾನಿ ಪ್ರತಿಕ್ರಿಯೆ ಇರುಸುಮುರುಸು ಉಂಟುಮಾಡಿದೆ. ‘ನೀವು ಈ ರೀತಿ ಆಗ್ರಹಿಸುವಂತಿಲ್ಲ, ಮಾತನಾಡದೇ ಇರುವುದು ನಿಮಗೆ ಬಿಟ್ಟ ವಿಚಾರ ಎಂದು’ ಪತ್ರಕರ್ತರು ಸಾಮೂಹಿಕವಾಗಿ ಗೋಷ್ಠಿಯನ್ನು ಬಹಿಷ್ಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


