ದೇಶ

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮಸ್ಯೆ ಇತ್ಯರ್ಥವಾಗಿಲ್ಲ: ಅಟಾರ್ನಿ ಜನರಲ್

ದೇಶವ್ಯಾಪಿ ತೀವ್ರ ಚರ್ಚೆಗೆ ಗುರಿಯಾಗಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಸಮಾಧಾನ ವಿವಾದ ಇನ್ನೂ ಬಗೆಹರಿದಿಲ್ಲ ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮಸ್ಯೆ ಇತ್ಯರ್ಥವಾಗಿಲ್ಲ: ಅಟಾರ್ನಿ ಜನರಲ್
ಸಂಗ್ರಹ ಚಿತ್ರ
Published On :
ನವದೆಹಲಿ: ದೇಶವ್ಯಾಪಿ ತೀವ್ರ ಚರ್ಚೆಗೆ ಗುರಿಯಾಗಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಸಮಾಧಾನ ವಿವಾದ ಇನ್ನೂ ಬಗೆಹರಿದಿಲ್ಲ ಎಂದು ಅಟಾರ್ನಿ ಜನರಲ್  ಕೆಕೆ ವೇಣುಗೋಪಾಲ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ತಿರುಗಿಬಿದಿದ್ದ ನಾಲ್ಕು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇನ್ನೂ ತಮ್ಮ ಬಂಡಾಯವನ್ನು ಬಿಟ್ಟಿಲ್ಲ.. ಹೀಗಾಗಿ ನ್ಯಾಯಾಧೀಶರ ನಡುವಿನ ವಿರಸ  ಮುಂದುವರೆದಿದ್ದು, ಬಿಕ್ಕಟ್ಟು ಶಮನಕ್ಕೆ ಇನ್ನೂ 2-3 ದಿನಗಳಾಗಬಹುದು ಎಂದು ಆಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಹೇಳಿದ್ದಾರೆ.
ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅಟಾರ್ನಿ ಜನರಲ್ ವೇಣುಗೋಪಾಲ್ ಅವರು, ಸಮಸ್ಯೆ ಇನ್ನೂ ಬಗೆಹರಿದಿಲ್ಲ.. ಇನ್ನು 2-3 ದಿನಗಳಲ್ಲಿ ಸಮಸ್ಯೆ ಇತ್ಯರ್ಥವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಇದೇ ಕೆಕೆ  ವೇಣುಗೋಪಾಲ್ ಅವರು, ನ್ಯಾಯಾಧೀಶರ ಸಮಸ್ಯೆಯನ್ನು ಆಂತರಿಕವಾಗಿ ಇತ್ಯರ್ಥಪಡಿಸಲಾಗಿದೆ. ಇನ್ನಾವ ಸಮಸ್ಯೆಯೂ ಇಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕೂಡ ಬಂಡಾಯ  ಶಮನಗೊಳಿಸುವ ಕುರಿತು ಭರವಸೆ ನೀಡಿತ್ತು. ಆದರೆ ಮತ್ತೆ ಸಮಸ್ಯೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.