ಅವಹೇಳನಕಾರಿ ಭಾಷೆ ಬಳಕೆ: ಸಲ್ಮಾನ್ ಖಾನ್, ಶಿಲ್ಪಾ ಶೆಟ್ಟಿ ವಿರುದ್ಧ ಕೋರ್ಟ್ ಗೆ ಅರ್ಜಿ
ಪರಿಶಿಷ್ಟ ಜಾತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಬಾಲಿವುಡ್ ನಟಿ ಶಿಲ್ಪಾ....

Published On :
ಮುಂಬೈ: ಪರಿಶಿಷ್ಟ ಜಾತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ವಿರುದ್ಧ ಬುಧವಾರ ಮುಂಬೈ ಭೋಯಿವಾಡ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಟಿವಿ ಕಾರ್ಯಕ್ರಮವೊಂದರಲ್ಲಿ ‘ಭಾಂಗಿ’ ಪದ ಬಳಸಿ ಎಸ್‍ಸಿ- ಎಸ್‍ಟಿ ಸಮುದಾಯವನ್ನ ಅವಮಾನಿಸಿದ್ದಾರೆಂಬ ಆರೋಪದ ಮೇಲೆ ಇಬ್ಬರ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಟೈಗರ್ ಜಿಂದಾ ಹೈ ಚಿತ್ರದ ಪ್ರಮೋಷನ್ ವೇಳೆ ಸಲ್ಮಾನ್ ಖಾನ್ ತನ್ನ ನೃತ್ಯ ಕೌಶಲ್ಯದ ಬಗ್ಗೆ ಹೇಳುವಾಗ ಈ ಸ್ಟೆಪ್ ಮಾಡ್ತಾ ನಾನು ಭಾಂಗಿ ತರ ಕಾಣ್ತೀನಿ ಎಂದಿದ್ದರು. ಶಿಲ್ಪಾ ಶೆಟ್ಟಿ ಕೂಡ ಈ ಪದವನ್ನ ಪದೇಪದೆ ಬಳಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸಲ್ಮಾನ್ ಖಾನ್ ಹಾಗೂ ಶಿಲ್ಪಾ ಶೆಟ್ಟಿ ವಿರುದ್ಧ ಎಸ್ಸಿ/ಎಸ್ ಟಿ ಕಾಯ್ದೆ ಅಡಿ ಎಫ್ ಐಆರ್ ದಾಖಲಿಸಬೇಕು ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Salman Khanಸಲ್ಮಾನ್ ಖಾನ್Shilpa Shettyಶಿಲ್ಪಾ ಶೆಟ್ಟಿMumbai courtಮುಂಬೈ ಕೋರ್ಟ್ಅವಹೇಳನಕಾರಿ ಹೇಳಿಕೆCasteist remarks
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


