ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ: ಡಿಎಸ್'ಪಿ ಸೇರಿ 12 ಪೊಲೀಸರಿಗೆ ಗಾಯ
ಮಹಿಳೆಯೊಬ್ಬರ ಅಂತಿಮ ಸಂಸ್ಕಾರದ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಡಿಎಸ್'ಪಿ ಸೇರಿ 12 ಮಂದಿ ಪೊಲೀಸರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

Published On :
ಜಮ್ಮು: ಮಹಿಳೆಯೊಬ್ಬರ ಅಂತಿಮ ಸಂಸ್ಕಾರದ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಡಿಎಸ್'ಪಿ ಸೇರಿ 12 ಮಂದಿ ಪೊಲೀಸರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಸೀಮಾ ಕುಮಾರಿ ಎಂಬ ಮಹಿಳೆ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ್ದ ರಿಂಕು ಕುಮಾರ್ ಎಂಬುವವರನ್ನು ವಿವಾಹವಾಗಿದ್ದರು. ಕುಮಾರ್ ಅವರು ಪಂಜಾಬ್ ಜಲಂಧರ್ ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾರೆ.
ಕಳೆದ ಭಾನುವಾರ ಅನಾರೋಗ್ಯದಿಂದಾಗಿ ಸೀಮಾ ಕುಮಾರಿಯವರು ಮೃತಪಟ್ಟಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಸೇರ್ಪಡೆಗೊಳ್ಳುವಂತೆ ಸೀಮಾಗೆ ಒತ್ತಡ ಹೇರಲಾಗಿದ್ದು, ಈ ಕಾರಣದಿಂದಲೇ ಆಕೆ ಸಾವನ್ನಪ್ಪಿದ್ದಾಳೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಮಹಿಳೆ ಮೃತಪಟ್ಟಿರುವ ಹಿನ್ನಲೆಯಲ್ಲಿ ಆಕೆಯ ಕುಟುಂಬ ಸದಸ್ಯರು ಹಿಂದು ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಿದ್ದಾರೆ. ಆದರೆ, ಕುಮಾರ್ ಅವರ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಮಹಿಳೆಯ ಕುಟುಂಬಸ್ಥರು, ಕೆಲ ಸ್ಥಳೀಯರು ಪ್ರತಿಭಟನೆ ನಡೆಸಲು ಆರಂಭಿಸಿದ್ದಾರೆ. ಇದರಂತೆ ಸ್ಥಳದಲ್ಲಿ ಘರ್ಷಣೆ ಏರ್ಪಟ್ಟಿದೆ. ಬಳಿಕ ಪೊಲೀಸರು, ಕುಮಾರ್ ಅವರ ಕುಟುಂಬಸ್ಥರಿಗೆ ಭದ್ರತೆಯನ್ನು ನೀಡಿದ್ದಾರೆ.
ಪ್ರತಿಭಟನೆ ವೇಳೆ ಘರ್ಷಣೆ ಏರ್ಪಟ್ಟಿದೆ. ಈ ವೇಳೆ ಸ್ಥಳದಲ್ಲಿದ್ದ ಕೆಲ ವಾಹನಗಳಿಗೆ, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಅಶ್ರುವಾಯು ಪ್ರಯೋಗ ಮಾಡಲಾಯಿತು ಎಂದು ಪೊಲೀಸರು ಹೇಳಿದ್ದಾರೆ,
ಕಲ್ಲು ತೂರಾಟ ನಡೆಸಿದ್ದ ಹಿನ್ನಲೆಯಲ್ಲಿ ಡಿಎಸ್'ಪಿ ಸೇರಿ ಒಟ್ಟು 12 ಮಂದಿ ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದರು. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಘಟನೆ ಸಂಬಂಧ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and KashmirRajouriಕಲ್ಲು ತೂರಾಟStone peltingರಜೌರಿPolicemen Injuredಪೊಲೀಸರು ಗಾಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


