ಉಗ್ರರಿಂದ ಅಣು ಸಮರ ಸಾಧ್ಯತೆ: ಭಾರತೀಯ ಸೇನಾ ಮುಖ್ಯಸ್ಥ ರಾವತ್ ಎಚ್ಚರಿಕೆ
ಈಗಾಗಲೇ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳನ್ನೂ ಕೂಡ ಹೊಂದುವ ಮೂಲಕ ಅವರು ಪರಮಾಣು ಯುದ್ಧ ಘೋಷಣೆ ಮಾಡಬಹುದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.

Published On :
ನವದೆಹಲಿ: ಈಗಾಗಲೇ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳನ್ನೂ ಕೂಡ ಹೊಂದುವ ಮೂಲಕ ಅವರು ಪರಮಾಣು ಯುದ್ಧ ಘೋಷಣೆ ಮಾಡಬಹುದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಆತಂಕ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದೆ 2018ನೇ ಸಾಲಿನ ರೈಸಿನಾ ಸಂವಾದದಲ್ಲಿ ಮಾತನಾಡಿದ ಬಿಪಿನ್ ರಾವತ್ ಅವರು, ಭಾರತದ ಗಡಿ ನುಸುಳಿ ಬರುವ ಉಗ್ರರ ಬಳಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿದ್ದು, ಭವಿಷ್ಯದಲ್ಲಿ ಅಣ್ವಸ್ತ್ರಗಳು ಕೂಡ ಅವರ ಕೈವಶವಾಗುವ ಸಾಧ್ಯತೆ ಇದೆ. ಹೀಗಾಗಿ ಭವಿಷ್ಯದಲ್ಲಿ ದೇಶಕ್ಕೆ ಉಗ್ರರಿಂದ ಅಣು ಸಮರದ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಅಣ್ವಸ್ತ್ರಗಳು ಸುಲಭದಲ್ಲಿ ಕೈವಶವಾಗುವ ಅಪಾಯ ಇರುವುದರಿಂದ ಮನುಕುಲ ನಾಶಕ್ಕೆ ಇದು ಕಾರಣವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಇದೇ ವೇಳೆ ಪಾಕಿಸ್ತಾನದ ವಿರುದ್ಧ ಪರೋಕ್ಷ ದಾಳಿ ಮಾಡಿದ ಜನರಲ್ ರಾವತ್, ಉಗ್ರ ಸಂಘಟನೆಗಳನ್ನು ಬೆಂಬಲಿಸುವ ಮತ್ತು ಅವುಗಳಿ ನೆರವು ನೀಡುವ ದೇಶಗಳನ್ನು ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಅಂತೆಯೇ ಅತ್ಯಂತ ಸಕ್ರಿಯವಾಗಿರುವ ಉಗ್ರ ಇಂಟರ್ ನೆಟ್ ಜಾಲವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಅಗತ್ಯವಿದೆ. ಅಂತೆಯೇ ನಮ್ಮ ಸೈಬರ್ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ಕಣ್ಣಿಡಬೇಕಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiIndian Armyterroristsಭಯೋತ್ಪಾದಕರುಭಾರತೀಯ ಸೇನೆBipin Rawatಬಿಪಿನ್ ರಾವತ್Raisina DialogueNuke Warರೈಸಿನಾ ಸಂವಾದಪರಮಾಣು ಯುದ್ಧ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


