ದೇಶ

ಅಹ್ಮದಾಬಾದ್: ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೇತನ್ಯಾಹುಗೆ ಪದ್ಮಾವತಿ ಚಿತ್ರದ ಘೂಮರ್ ಹಾಡಿನ ಸ್ವಾಗತ!

ಗುಜರಾತ್, ರಾಜಸ್ಥಾನ, ಹರ್ಯಾಣ ಸೇರಿದಂತೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರವನ್ನು ಒಂದೊಂದೇ ರಾಜ್ಯದಲ್ಲಿ ನಿಷೇಧಿಸಲಾಗುತ್ತಿದೆ.

ಅಹ್ಮದಾಬಾದ್: ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೇತನ್ಯಾಹುಗೆ ಪದ್ಮಾವತಿ ಚಿತ್ರದ ಘೂಮರ್ ಹಾಡಿನ ಸ್ವಾಗತ!
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ, ಇಸ್ರೇಲ್ ಪ್ರಧಾನಿ ನೇತನ್ಯಾಹುಗೆ ಪದ್ಮಾವತಿ ಚಿತ್ರದ ಘೂಮರ್ ಹಾಡಿನ ಸ್ವಾಗತ!
Published On :
ಅಹ್ಮದಾಬಾದ್: ಗುಜರಾತ್, ರಾಜಸ್ಥಾನ, ಹರ್ಯಾಣ ಸೇರಿದಂತೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರವನ್ನು ಒಂದೊಂದೇ ರಾಜ್ಯದಲ್ಲಿ ನಿಷೇಧಿಸಲಾಗುತ್ತಿದೆ. ವಿಚಿತ್ರವೆಂಬಂತೆ ಇದೇ ಚಿತ್ರದ ವಿವಾದಾತ್ಮಕ ಘೂಮರ್ ಹಾಡನ್ನು ಅಹ್ಮದಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ-ಇಸ್ರೇಲ್ ಪ್ರಧಾನಿ ನೇತನ್ಯಾಹು ಅವರನ್ನು ಸ್ವಾಗತಿಸಲು ಬಳಸಲಾಗಿದೆ. 
ಪ್ರಧಾನಿಗಳನ್ನು ಸ್ವಾಗತಿಸುವ ವೇಳೆ ಘೋಮರ್ ಹಾಡಿಗೆ ಹೆಜ್ಜೆ ಹಾಕಿದ್ದ ಯುವತಿಯ ನೃತ್ಯ ಸಹ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ಗೀತೆಗೆ ನೃತ್ಯ ಮಾಡಿದ್ದ ಹಿನ್ನೆಲೆಯಲ್ಲಿ ಶಾಲಾ ಕಾರ್ಯಕ್ರಮವೊಂದಕ್ಕೆ ಅಡ್ಡಿ ಪಡಿಸಲಾಗಿತ್ತು. 
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಚಿತ್ರಕ್ಕೆ ಹಲವು ರಾಜ್ಯಗಳಲ್ಲಿ ನಿಷೇಧ ವಿಧಿಸಲಾಗಿದ್ದು, ನಿಷೇಧ ವಿಧಿಸುವ ನಿರ್ಧಾರವನ್ನು ಪ್ರಶ್ನಿಸಿ ಚಿತ್ರ ತಂಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.