ದೇಶ

ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ: ಎಎಪಿ

ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ....

ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ: ಎಎಪಿ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದು, ಆಯೋಗದ ಈ ನಿರ್ಧಾರಕ್ಕೆ ಆಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ. ಶಾಸಕರಿಗೆ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅವರು ಆರೋಪಿಸಿದ್ದಾರೆ.
ಚುನಾವಣಾ ಆಯುಕ್ತೆ ಎಕೆ ಜ್ಯೋತಿ ಅವರು ನಿವೃತ್ತಿಯಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ರುಣ ತಿರಿಸಲು ಈ ರೀತಿ ಶಿಫಾರಸು ಮಾಡಿದ್ದಾರೆ ಎಂದು ಭಾರದ್ವಾಜ್ ದೂರಿದ್ದಾರೆ.
ಎಎಪಿ ಶಾಸಕರು ಯಾವತ್ತೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಚುನಾವಣಾ ಆಯೋಗದ ಈ ನಿರ್ಧಾರ ಸರಿ ಇಲ್ಲ ಮತ್ತು ಇದು ನಮ್ಮ ಪಕ್ಷದ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.