ಭಾರತದಿಂದ ಕದನ ವಿರಾಮ ಉಲ್ಲಂಘನೆ: ಪ್ರತಿಭಟನೆ ದಾಖಲಿಸಿದ ಪಾಕ್
ಭಾರತೀಯ ಸೇನೆ ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು,...

Published On :
ಇಸ್ಲಾಮಾಬಾದ್: ಭಾರತೀಯ ಸೇನೆ ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಪಾಕಿಸ್ತಾನ, ಈ ಸಂಬಂಧ ಶುಕ್ರವಾರ ಎರಡು ಬಾರಿ ಭಾರತದ ಡೆಪ್ಯೂಟಿ ಹೈಕಮಿಷನರ್ ಜೆ.ಪಿ ಸಿಂಗ್ ಅವರನ್ನು ಕರೆಸಿಕೊಂಡು ತನ್ನ ಪ್ರತಿಭಟನೆ ದಾಖಲಿಸಿದೆ.
ಇಂದು ಪಾಕ್ ವಿದೇಶಾಂಗ ಇಲಾಖೆಯ ಮಹಾ ನಿರ್ದೇಶಕ(ದಕ್ಷಿಣ ಮತ್ತು ಸಾರ್ಕ್) ಮಹಮದ್ ಫೈಸಲ್ ಅವರು ಜೆ.ಪಿ. ಸಿಂಗ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು, ಭಾರತದ ಯೋಧರು ನಡೆಸಿದ ದಾಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಸಂಯಮದಿಂದ ಇದ್ದರೂ, ಭಾರತ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಈ ವರ್ಷದ ಜನವರಿಯಲ್ಲಿ ಭಾರತ 110 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಭಾರತದ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


