ಉಗ್ರರಿಗೆ ಆರ್ಥಿಕ ನೆರವು ಪ್ರಕರಣ: ಉಗ್ರ ಸಲಾಹುದ್ದೀನ್ ಪುತ್ರನ ನ್ಯಾಯಾಂಗ ಬಂಧನ ವಿಸ್ತರಣೆ
ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್...

Published On :
ನವದೆಹಲಿ: ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಪುತ್ರ ಸಯ್ಯದ್ ಶಾಹಿದ್ ನ ನ್ಯಾಯಾಂಗ ಬಂಧನ ಅವಧಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಫೆಬ್ರವರಿ 5ರ ವರೆಗೆ ವಿಸ್ತರಿಸಿದೆ.
ಜಮ್ಮು ಮತ್ತು ಕಾಶ್ಮೀರದ ಸರ್ಕಾರಿ ನೌಕರನಾಗಿದ್ದ ಶಾಹಿದ್ ನನ್ನು ಕಳೆದ ವರ್ಷ ಅಕ್ಟೋಬರ್ 24ರಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ್ದರು. ಆರೋಪಿಯನ್ನು ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಓ ಪಿ ಸೈನಿ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಫೆಬ್ರವರಿ 5ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
2011 ರಿಂದ 2014ರ ನಡುವೆ ಸಯ್ಯದ್ ಶಾಹಿದ್ ಸಿರಿಯಾ ಮೂಲದ ಗುಲಾಮ್ ಮೊಹಮ್ಮದ್ ಭಟ್ ಗೆ ಹಣ ವರ್ಗಾವಣೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ಎನ್ ಐಎ ತನಿಖಾಧಿಕಾರಿಗಳು ತಿಳಿಸಿದ್ದಾರೆ.
2011ರ ಉಗ್ರರಿಗೆ ಆರ್ಥಿಕ ನೆರವು ಪ್ರರಕರಣಕ್ಕೆ ಸಂಬಂಧಿಸಿದೆ ಎನ್ಐಎ ಅಧಿಕಾರಿಗಳು ಶಾಹಿದ್ ಸೇರಿದಂತೆ ಆರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನ್ಯಾಯಾಂಗ ಬಂಧನSyed SalahuddinTerror funding caseSyed Shahid judicial custodyಉಗ್ರರಿಗೆ ಆರ್ಥಿಕ ನೆರವು ಪ್ರಕರಣಸಯ್ಯದ್ ಶಾಹಿದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


