ಎಎಪಿ ಶಾಸಕರ ಲಾಭದಾಯಕ ಹುದ್ದೆ ಪ್ರಕರಣ: ದುರದೃಷ್ಟಕರ ಎಂದ ಕುಮಾರ್ ವಿಶ್ವಾಸ್
ಲಾಭದಾಯಕ ಹುದ್ದೆ ಹೊಂದಿದೆ ಆರೋಪದ ಮೇಲೆ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು...

Published On :
ಅಹ್ಮದನಗರ: ಲಾಭದಾಯಕ ಹುದ್ದೆ ಹೊಂದಿದೆ ಆರೋಪದ ಮೇಲೆ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವುದು ದುರದೃಷ್ಟಕರ ಮತ್ತು ದುಃಖಕರ ಸಂಗತಿ ಎಂದು ಆಪ್ ನಾಯಕ ಕುಮಾರ್ ವಿಶ್ವಾಸ್ ಅವರು ಶನಿವಾರ ಹೇಳಿದ್ದಾರೆ.
'ಇದು ಅತ್ಯಂತ ದುರದೃಷ್ಟಕರ ಮತ್ತು ದುಃಖದ ವಿಚಾರ. ಈ ಹಿಂದೆ ಆಪ್ ಶಾಸಕರನ್ನು ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ವಿಚಾರದಲ್ಲಿ ನಾನು ಕೆಲವು ಸಲಹೆಗಳನ್ನು ನೀಡಿದ್ದೆ. ಆದರೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ಹೇಳಿದ್ದರಿಂದ ನಾನು ಸುಮ್ಮನಾಗಿದ್ದೆ' ಎಂದು ಕುಮಾರ್ ವಿಶ್ವಾಸ್ ತಿಳಿಸಿದ್ದಾರೆ.
ಈ ಮಧ್ಯೆ, ಆಮ್ ಆದ್ಮಿ ಶಾಸಕರ ಲಾಭದಾಯಕ ಹುದ್ದೆ ವಿರುದ್ಧ ವಿರುದ್ಧ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದ ಪ್ರಶಾಂತ್ ಪಟೇಲ್ ಅವರು, 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವ ಚುನಾವಣಾ ಆಯೋಗದ ನಿರ್ಧಾರ ತಮಗೆ ತೃಪ್ತಿ ತಂದಿದೆ ಎಂದಿದ್ದಾರೆ.
ಚುನಾವಣಾ ಆಯೋಗ ನಿನ್ನೆ ಲಾಭದಾಯಕ ಹುದ್ದೆ ಹೊಂದಿರುವ 20 ಎಎಪಿ ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದೆ. ಇದನ್ನು ಪ್ರಶ್ನಿಸಿ ಆಪ್ ಶಾಸಕರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಹೈಕೋರ್ಟ್ ಆಯೋಗದಿಂದ ವರದಿ ಕೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


