ದೇಶ

ಹರಿಯಾಣ: ಪ್ರಾಂಶುಪಾಲರನ್ನು ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ

12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ಶನಿವಾರ ಹರಿಯಾಣದ...

ಹರಿಯಾಣ: ಪ್ರಾಂಶುಪಾಲರನ್ನು ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
Published On :
ಹರಿಯಾಣ: 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಕೊಂದ ಆಘಾತಕಾರಿ ಘಟನೆ ಶನಿವಾರ ಹರಿಯಾಣದ ಯಮುನನಗರದಲ್ಲಿ ನಡೆದಿದೆ.
12ನೇ ತರಗತಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ತನ್ನ ತಂದೆಯ ಪರವಾನಗಿ ಹೊಂದಿರುವ ಬಂದೂಕನ್ನು ಬಳಸಿ ಪ್ರಾಂಶುಪಾಲರಾದ ರಿಟಾ ಛಾಬ್ರಾ ಅವರನ್ನು ಶಾಲೆಯ ಅವರ ಕೊಠಡಿಯಲ್ಲೇ ಗುಂಡು ಹರಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
ಘಟನೆ ಬಳಿಕ ಛಾಬ್ರಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ವಿದ್ಯಾರ್ಥಿಗಳು ಮತ್ತು ಪೊಲೀಸ್ ಮೂಲಗಳ ಪ್ರಕಾರ, ಕೊಲೆ ಮಾಡಿದ 12ನೇ ತರಗತಿ ವಿದ್ಯಾರ್ಥಿಯನ್ನು ತಾತ್ಕಾಲಿಕವಾಗಿ ಶಾಲೆಯಿಂದ ಹೊರಹಾಕಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಇಂದು ಬೆಳಗ್ಗೆ ಎಂದಿನಂತೆ ಶಾಲೆಗೆ ಬಂದ ವಿದ್ಯಾರ್ಥಿ ಪ್ರಾಂಶುಪಾಲರನ್ನು ಭೇಟಿಯಾಗಬೇಕು ಎಂದು ಹೇಳಿದ್ದ. ಬಳಿಕ ನೇರವಾಗಿ ಪ್ರಾಂಶುಪಾಲರ ಕೊಠಡಿಗೆ ಹೋಗಿ ಬಂದೂಕಿನಿಂದ ಗುಂಡು ಹರಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಶಾಲೆಯ ಜವಾನ ಸೇರಿದಂತೆ ಆರು ಮಂದಿ ಸಿಬ್ಬಂದಿ ವಿದ್ಯಾರ್ಥಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಪೊಲೀಸರು 12ನೇ ತರಗತಿ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.