ನೀಟ್ ಪರೀಕ್ಷೆ 2018; ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ
ಈ ವರ್ಷವೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯ ಪಠ್ಯ ಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ....

Published On :
ನವದೆಹಲಿ: ಈ ವರ್ಷವೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯ ಪಠ್ಯ ಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ವರ್ಷದ ಪಠ್ಯ ಕ್ರಮವೇ ಈ ವರ್ಷದ ನೀಟ್ ಪರೀಕ್ಷೆಗೆ ಇರಲಿದೆ ಎಂದು ಶನಿವಾರ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದೆ.
2018ರ ನೀಟ್ ಪರೀಕ್ಷೆಯ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. 2017ರಲ್ಲಿ ಇದ್ದ ಪಠ್ಯಕ್ರಮವೇ ಈ ವರ್ಷವೂ ಇರಲಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ ಇ) ಇಂದು ಸ್ಪಷ್ಟಪಡಿಸಿದೆ.
ಕಳೆದ ಬುಧವಾರವಷ್ಟೇ ಇಂಡಿಯನ್ ಎಕ್ರೆಸ್ ಪ್ರೆಸ್ ಜೊತೆ ಮಾತನಾಡಿದ್ದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರು, ನಾವು ನೀಟ್ ಗಾಗಿ ಪ್ರಶ್ನೆ ಪತ್ರಿಕೆಯೊಂದನ್ನು ರಚಿಸುವಾಗ ಎಲ್ಲಾ ರಾಜ್ಯ ಸರ್ಕಾರಗಳ ಪಠ್ಯಕ್ರಮವನ್ನು ಪರಿಗಣಿಸಬೇಕೆಂದು ನಿರ್ಧರಿಸಿದ್ದೇವೆ, ಇದರಿಂದಾಗಿ ರಾಜ್ಯ ಪಠ್ಯಕ್ರಮ ಕಲಿತ ವಿದ್ಯಾರ್ಥಿಗಳಿಗೆ ಈ ವರ್ಷದ ನೀಟ್ ಪರೀಕ್ಷೆ ಯಾವ ರೀತಿಯಲ್ಲೂ ಕಷ್ಟವಾಗುವುದಿಲ್ಲ ಎಂದು ಹೇಳಿದ್ದರು. ಆದರೆ ಪರೀಕ್ಷೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಪಠ್ಯಕ್ರಮ ಬದಲಾಸಿದರೆ ಕಷ್ಟವಾಗುತ್ತೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಯೂಟರ್ನ್ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷದ ತನಕ, ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ಕೇಂದ್ರ ಮಾದ್ಯಮಿಕ ಶಿಕ್ಷಣ ಮಂಡಳಿ ಪಠ್ಯಕ್ರಮವನ್ನು ಆಧರಿಸಿ ರಚಿಸಲಾಗುತ್ತಿತ್ತು, ಇದು ರಾಜ್ಯ ಸರ್ಕಾರದ ಪಠ್ಯಕ್ರಮ ಕಲಿತ ವಿದ್ಯಾರ್ಥಿಗಳಿಗೆ ಕಠಿಣವಾಗುತ್ತಿತ್ತು. ಅನೇಕ ರಾಜ್ಯಗಳಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಸೇರಿ ನಾನಾ ವಿಷಯಗಳ ಪಠ್ಯಕ್ರಮದಲ್ಲಿ ವ್ಯತ್ಯಾಸವಿರುವ ಕಾರಣ ವಿದ್ಯಾರ್ಥಿಗಳಿಗೆ ನೀಟ್ ಕಬ್ಬಿಣದ ಕಡಲೆ ಎನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


