ದೆಹಲಿ: ಭವನಾ ಕೈಗಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 17 ಜನರ ಸಾವು, ಇಬ್ಬರಿಗೆ ಗಾಯ
ರಾಜಧಾನಿ ದೆಹಲಿಯ ಉತ್ತರ ಭಾಗದಲ್ಲಿರುವ ಭವನಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ...

Published On :
ನವದೆಹಲಿ: ರಾಜಧಾನಿ ದೆಹಲಿಯ ಉತ್ತರ ಭಾಗದಲ್ಲಿರುವ ಭವನಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಎರಡು ಮಹಡಿಯ ಕಾರ್ಖಾನೆಯಲ್ಲಿ ಪಟಾಕಿಗಳನ್ನು ಇರಿಸಲಾಗಿತ್ತು. ನಿನ್ನೆ ರಾತ್ರಿ ಕಟ್ಟಡಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಕಟ್ಟಡದ ಸುತ್ತಲೂ ಬೆಂಕಿ ಆವರಿಸಿಕೊಂಡ ಪರಿಣಾಮ ಕಟ್ಟಡದಲ್ಲಿದ್ದ 10 ಮಂದಿ ಮಹಿಳೆಯರು, 7 ಮಂದಿ ಪುರುಷಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ತನಿಕೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ನಿನ್ನೆ ಸಂಜೆ 6.30ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ಕರೆ ಬಂದಿತ್ತು. ಕೂಡಲೇ 10 ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಹೋಗಲಾಯಿತು. ಪ್ರಸ್ತುತ ಪರಿಸ್ಥಿತಿ ನಿಯಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ನೆಲ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ ನಂತರ ಬೆಂಕಿಯ ಕೆನ್ನಾಲಿಗೆ ಮೊದಲು ಹಾಗೂ ಎರಡನೇ ಮಹಡಿಗೂ ಹೊತ್ತಿಕೊಂಡಿದೆ. ಕಾರ್ಯಾಚರಣೆ ವೇಳೆ ನೆಲಮಹಡಿಯಲ್ಲಿ 4 ಮೃತದೇಹ, ಮೊದಲನೇ ಮಹಡಿಯಲ್ಲಿ 13 ಮೃತದೇಹಗಳನ್ನು ಹೊರಗೆ ತೆಗೆಯಲಾಯಿತು. ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ವ್ಯಕ್ತಿಯೋರ್ವ ಮಹಡಿಯಿಂದ ಕಳೆಗ ಹಾರಿದ್ದು, ವ್ಯಕ್ತಿಗೆ ಮೂಳೆ ಮುರಿದಿದೆ ಎಂದು ಅಗ್ನಿಶಾಮಕ ದಳದ ನಿರ್ದೇಶಕ ಜಿ.ಸಿ. ಮಿಶ್ರಾ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


