ಕೇಜ್ರಿವಾಲ್ ಗೆ ಭಾರಿ ಮುಖಭಂಗ: 20 ಶಾಸಕರ ಅನರ್ಹತೆ ಶಿಫಾರಸ್ಸಿಗೆ ರಾಷ್ಟ್ರಪತಿ ಕೋವಿಂದ್ ಅಂಕಿತ
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್..

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಅಂಕಿತ ಹಾಕಿದ್ದಾರೆ.
ಲಾಭದಾಯಕ ಹುದ್ದೆಯನ್ನು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶುಕ್ರವಾರ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿತ್ತು.
2015 ಮಾರ್ಚ್ 13 ರಿಂದ ಸೆಪ್ಟೆಂಬರ್ 8 2016ರವರೆಗೆ ಈ ಶಾಸಕರು ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ಲಾಭದಾಯಕವಾಗಿ ಹೊಂದಿದ್ದರು. ಇದರಿಂದಾಗಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸಿನಲ್ಲಿ ಹೇಳಿತ್ತು, ಆದರೆ, ಈ ಶಾಸಕರು ಯಾವುದೇ ಸಂಬಳ, ಸವಲತ್ತು ಪಡೆದಿಲ್ಲ ಎಂದು ಆಮ್ ಆದ್ಮಿ ಪಕ್ಷ ವಾದಿಸಿತ್ತು.
ರಾಷ್ಟ್ರಪತಿಗಳ ಅಂಕಿತದಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದ್ದು, ಶೀಘ್ರದಲ್ಲಿಯೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


