ದೇಶ

ಜಮ್ಮು-ಕಾಶ್ಮೀರವನ್ನು ಯುದ್ಧದ ಅಖಾಡ ಮಾಡಬೇಡಿ, ಸ್ನೇಹದ ಸೇತುವೆ ಮಾಡಿ: ಸಿಎಂ ಮೆಹಬೂಬಾ ಮುಫ್ತಿ

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಈ ನಡುವೆ ಜಮ್ಮು ಮತ್ತು ಕಾಶ್ಮೀರವನ್ನು ಯುದ್ಧದ ಅಖಾಡ ಮಾಡಬೇಡಿ, ಸ್ನೇಹದ ಸೇತುವೆಯಾಗಿ ಮಾಡಿ ಎಂದು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಭಾನುವಾರ ಹೇಳಿದ್ದಾರೆ...

ಜಮ್ಮು-ಕಾಶ್ಮೀರವನ್ನು ಯುದ್ಧದ ಅಖಾಡ ಮಾಡಬೇಡಿ, ಸ್ನೇಹದ ಸೇತುವೆ ಮಾಡಿ: ಸಿಎಂ ಮೆಹಬೂಬಾ ಮುಫ್ತಿ
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
Published On :
ಜಮ್ಮು-ಕಾಶ್ಮೀರ: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಈ ನಡುವೆ ಜಮ್ಮು ಮತ್ತು ಕಾಶ್ಮೀರವನ್ನು ಯುದ್ಧದ ಅಖಾಡ ಮಾಡಬೇಡಿ, ಸ್ನೇಹದ ಸೇತುವೆಯಾಗಿ ಮಾಡಿ ಎಂದು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಭಾನುವಾರ ಹೇಳಿದ್ದಾರೆ. 
ಬಾರಾಮೂಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ನೂತನವಾಗಿ ನೇಮಕಗೊಂಡ ಪೊಲೀಸ್ ಪೇದೆಗಳ ಪರೇಡ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಇಂದು ನಮ್ಮ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಗುಂಡಿನ ಚಕಮಕಿಗಳು ನಡೆಯುತ್ತಿದೆ. ಒಂದೆಡೆ ರಕ್ತದ ಓಕುಳಿ ಹರಿಯುತ್ತಿದ್ದರೆ, ಮತ್ತೊಂದೆ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿ ನಮ್ಮ ರಾಜ್ಯ ಸಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರವನ್ನು ಯುದ್ಧದ ಅಖಾಡ ಮಾಡಬೇಡಿ, ಸ್ನೇಹದ ಸೇತುವೆಯಾಗಿ ಮಾಡಿ ಎಂದು ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಬಳಿ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕೆಲಸ ಅತ್ಯಂತ ಕಠಿಣವಾದದ್ದು. ಏಕೆಂದರೆ, ಕರ್ತವ್ಯದಲ್ಲಿರುವ ಸಂದರ್ಭಲ್ಲಿ ಅವರು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಾಗ ನಮ್ಮ ಜನರೇ ನಮ್ಮ ಎದುರಿಗೆ ಬಂದು ನಿಲ್ಲುತ್ತಾರೆ. ಇಂತಹ ಪರಿಸ್ಥಿತಿಗಳನ್ನು ಎದುರಿಸುವಾಗ ಪೊಲೀಸರು ಸಾಕಷ್ಟು ತಾಳ್ಮೆಗಳನ್ನು ಕಾಯ್ದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.