ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಪಾಕ್ ಪುಂಡಾಟ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ...

Published On :
ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಕೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಚಂದನ್ ಕುಮಾರ್ ರಾಯ್ (25) ಹುತಾತ್ಮರಾದ ಯೋಧರಾಗಿದ್ದಾರೆಂದು ತಿಳಿದುಬಂದಿದೆ. ಮಂಧಾರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ, ಮಾರ್ಟರ್ ಶೆಲ್'ಗಳ ದಾಳಿ ನಡೆಸಿದ್ದು, ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.
ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಯೋಧ ಚಂದನ್ ರಾಯ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಸೇನೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಚಂದನ್ ರಾಯ್ ಅವರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಕಳೆದ 5 ದಿನಗಳಿಂದಲೂ ಪಾಕಿಸ್ತಾನ ಗಡಿಯಲ್ಲಿ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಲೇ ಇದೆ. ಭಾರತೀಯ ಸೇನೆ ಹಾಗೂ ಗಡಿ ನಾಗರೀಕ ಪ್ರದೇಶಗಳನ್ನು ಗುರಿ ಮಾಡಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆmartyrಹುತಾತ್ಮಯೋಧsoldierMendhar Sectorಮೆಂಧಾರ್ ಸೆಕ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


