ಗಣರಾಜ್ಯೋತ್ಸವ ದಿನದಂದು ಉಗ್ರದಾಳಿಗೆ ಭಾರಿ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ
ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Published On :
ನವದೆಹಲಿ: ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಾರತೀಯ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದು, ಇದಕ್ಕಾಗಿ ಮೂರರಿಂದ ನಾಲ್ಕು ಉಗ್ರರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ಈ ಉಗ್ರರು ಪಾಕಿಸ್ತಾನಿ ಸೇನಾ ಕ್ಯಾಂಪ್ ಗಳತ್ತ ಕಾಣಿಸಿಕೊಂಡಿದ್ದು, ಭಾರತೀಯ ಗಡಿಯೊಳಗೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಅಂತೆಯೇ ಈ ಬಗ್ಗೆ ತೀವ್ರಕಟ್ಟೆಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಿದ್ದು, ಉಗ್ರರಿಗೆ ಪಾಕಿಸ್ತಾನಿ ಗುಪ್ತಚರ ಇಲಾಖೆ ಐಎಸ್ಐ ಉಗ್ರರನ್ನು ಭಾರತೀಯ ಗಡಿಯೊಳಗೆ ಒಳನುಸುಳಲು ನೆರವು ನೀಡುತ್ತಿದ್ದು, ಗಡಿಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಜಮ್ಮು ಮತ್ತು ಕಾಶ್ಮೀರTerror AttackJammu and KashmirInternational Borderಅಂತಾರಾಷ್ಟ್ರೀಯ ಗಡಿRepublic Dayಗಣರಾಜ್ಯೋತ್ಸವ ದಿನಉಗ್ರದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


