ರೈಲಿನಲ್ಲಿ ಬಾಂಗ್ಲಾ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ, ಬಿಎಸ್ಎಫ್ ಯೋಧ ಅಮಾನತು
ಭಾರತ ಮತ್ತು ಬಾಂಗ್ಲಾದೇಶಕ್ಕೆ ಸಂಪರ್ಕ ಕಲ್ಪಿಸುವ ಮೈತ್ರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಗ್ಲಾ ಮಹಿಳೆಗೆ ಲೈಂಗಿಕ ಕಿರುಕು ನೀಡಿದ ಆರೋಪದ....

Published On :
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶಕ್ಕೆ ಸಂಪರ್ಕ ಕಲ್ಪಿಸುವ ಮೈತ್ರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಗ್ಲಾ ಮಹಿಳೆಗೆ ಲೈಂಗಿಕ ಕಿರುಕು ನೀಡಿದ ಆರೋಪದ ಮೇಲೆ ಬಿಎಸ್ಎಫ್ ಯೋಧನನ್ನು ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಕೋಲ್ಕತಾಗೆ ಆಗಮಿಸುತ್ತಿದ್ದ ಮೈತ್ರಿ ಎಕ್ಸ್ ಪ್ರೆಸ್ ನಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಈ ಸಂಬಂಧ ಮಹಿಳೆ ಪತಿ ಕೋಲ್ಕತಾ ಸ್ಟೇಷನ್ ಮ್ಯಾನೇಜರ್ ಗೆ ದೂರು ನೀಡಿದ್ದರು. ಬಳಿಕ ಗಡಿ ರಕ್ಷಣಾ ಪಡೆ(ಬಿಎಸ್ಎಫ್)ಗೆ ಮಾಹಿತಿ ನೀಡಲಾಗಿತ್ತು.
ಬಿಎಸ್ ಎಫ್ ನ 99ನೇ ಬಟಾಲಿಯನ್ ಸೇರಿದ ಪೇದೆ ವಿ ಭವಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಬಿಎಸ್ಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಗ್ಲಾದೇಶ ಗಡಿಯಲ್ಲಿ ಸಂಚರಿಸುವ ಮೈತ್ರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಭವಿ ಅವರನ್ನು ಪ್ರಯಾಣಿಕರ ಭದ್ರತೆಗಾಗಿ ನಿಯೋಜಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BSF jawanಬಿಎಸ್ಎಫ್ ಯೋಧmolesting Bangladeshi womanMaitree Expressಬಾಂಗ್ಲಾ ಮಹಿಳೆಗೆ ಲೈಂಗಿಕ ಕಿರುಕುಳಮೈತ್ರಿ ಎಕ್ಸ್ ಪ್ರೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


