20 ಶಾಸಕರ ಅನರ್ಹತೆ ಪ್ರಶ್ನಿಸಿ ಹೈಕೋರ್ಟಿಗೆ ಎಎಪಿ ಶಾಸಕರ ಅರ್ಜಿ
ಲಾಭದಾಯಕ ಹುದ್ದೆ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಲ್ಲಿಸಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ಅಂಕಿತ ಹಾಕಿರುವ ಸಂಬಂಧ ದೆಹಲಿಯ ಅನರ್ಹ 20 ಶಾಸಕರು ಹೈಕೋರ್ಟಿಗೆ ಇಂದು ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಲಾಭದಾಯಕ ಹುದ್ದೆ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಲ್ಲಿಸಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ಅಂಕಿತ ಹಾಕಿರುವುದನ್ನ ಪ್ರಶ್ನಿಸಿ ದೆಹಲಿಯ ಅನರ್ಹ 20 ಶಾಸಕರು ಹೈಕೋರ್ಟಿಗೆ ಇಂದು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ದೆಹಲಿ ಸರ್ಕಾರದಲ್ಲಿ ಸಂಸದೀಯ ಹುದ್ದೆ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಸಲ್ಲಿಸಿದ್ದ ಶಿಫಾರಸ್ಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದರು.
ಈ ಸಂಬಂಧ ನಿನ್ನೆ ಅನರ್ಹ 20 ಶಾಸಕರು ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ನಿರ್ಧರಿಸಿ, ನಂತರ ವಾಪಾಸ್ ಪಡೆದುಕೊಂಡಿದ್ದರು.
ಶಾಸಕರ ಅನರ್ಹತೆ ವಿಷಯದಲ್ಲಿ ಚುನಾವಣಾ ಆಯೋಗದ ನಡೆ ಅಸಂವಿಧಾನಿಕ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


